Thursday December 7 2017

Follow on us:

Contact Us
    323

ಗಣೇಶಪೇಟೆಯು ಪಾಕಿಸ್ತಾನದಂತಿದೆ ಎಂದು ಹೇಳಿಕೆ ನೀಡಿದ್ದ ಮೌಲ್ವಿಯ ಬಂಧನ!

ನ್ಯೂಸ್ ಕನ್ನಡ-(07.12.17): ನಮ್ಮನ್ನು ಯಾರೂ ಪಾಕಿಸ್ತಾನಕ್ಕೆ ಕಳಿಸಬೇಕೆಂದೇನಿಲ್ಲ. ಇಲ್ಲಿನ ಗಣೇಶಪೇಟೆಯೇ ನಮಗೆ ಪಾಕಿಸ್ತಾನದಂತೆ ಕಾಣುತ್ತಿದೆ.. ನಾವೆಲ್ಲರೂ ಒಗ್ಗಟ್ಟಾಗಿ ನಿಂತರೆ ನಮ್ಮನ್ನು ಮುಟ್ಟಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದ ಧರ್ಮಗುರುಗಳಾದ ಮೌಲವಿ ಮುತವಲ್ಲಿ ಅಬ್ದುಲ್ ಹಮೀದ್ ಖೈರಾತಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಮೌಲ್ವಿವಿರುದ್ಧ ಶರಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಾಂತಿ ಭಂಗ ಮತ್ತು ಪ್ರಚೋದನಾತ್ಮಕ ಪ್ರಕರಣ 153 ರಡಿ ಪ್ರಕರಣ ದಾಖಲಾಗಿತ್ತು. ಬುಧವಾರ ರಾತ್ರಿ ಆರೋಪಿಯನ್ನು ಬಂಧಿಸಿದ ಪೋಲಿಸರು ಕಿಮ್ಸ್ ನಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಅಲ್ಲಿಂದ ಅಮರಗೋಳದಲ್ಲಿರುವ ಜೆಎಂ ಎಫ್ ಸಿ ನಾಲ್ಕನೇ ಕೋರ್ಟ್‌ ನ್ಯಾಯಾಧೀಶೆ ದೀಪ್ತಿ ನಾಡಗೌಡ ಅವರ ನಿವಾಸದಲ್ಲಿ ಆರೋಪಿಯನ್ನು ಹಾಜರು ಪಡಿಸಲಾಯಿತು.

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮುಸ್ಲಿಮ್ ಯುವತಿಯರ ಜಿಮಿಕಿ ಕಮ್ಮಲ್ ಡ್ಯಾನ್ಸ್: ಅಪಮಾನಿಸಿದವರ ವಿರುದ್ಧ ದೂರು ದಾಖಲು!

ಮುಂದಿನ ಸುದ್ದಿ »

ಬ್ರೇಕ್ ಫಾಸ್ಟ್ ಮಿಸ್ ಮಾಡ್ತೀರಾ? ನಿಮಗೆ ಅಪಾಯ ತಪ್ಪಿದ್ದಲ್ಲ.. ಇದನ್ನು ಓದಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×