Tuesday February 13 2018

Follow on us:

Contact Us
    380

“ಪ್ರೇಮಿಗಳ ದಿನದಂದು ಪ್ರೇಮಿಗಳನ್ನು ಕಂಡರೆ ಮದುವೆ ಮಾಡಿಸುತ್ತೇವೆ”

ನ್ಯೂಸ್ ಕನ್ನಡ ವರದಿ-(13.2.18): ಹುಬ್ಬಳ್ಳಿ: ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲು ಯಾವುದೇ ಕಾರಣಕ್ಕೂ ನಾವು ಅವಕಾಶ ನೀಡುವುದಿಲ್ಲ, ಪ್ರೇಮಿಗಳು ಸಾರ್ವಜನಿಕವಾಗಿ ಕಂಡು ಬಂದಲ್ಲಿ ಅವರನ್ನು ಮದುವೆ ಮಾಡಿಸುವುದಾಗಿ ಕ್ರಾಂತಿ ಸೇನೆ ರಾಜ್ಯಾದ್ಯಕ್ಷ ವಿಠ್ಠಲ ಪವಾರ್ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ದೇಶ ಹಾಗೂ ಸಂಸ್ಕೃತಿಗೆ ವಿರುದ್ಧವಾಗಿ ಇಂದು ಯುವ ಸಮೂಹ ಪ್ರೇಮಿಗಳ ದಿನಾಚರಣೆ ಎಂಬತಹ ಪಾಶ್ಚಾತ್ಯ ಸಂಸ್ಕೃತಿಯತ್ತ ಮುಖ ಮಾಡುತ್ತಿರುವುದು ದುರಂತವಾಗಿದೆ. ಇಂದು ಪ್ರೇಮಿಗಳ ದಿನಾಚಾಣೆಯ ನೆಪದಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಅಧಿಕವಾಗುತ್ತಿದ್ದು, ಯಾವುದೇ ಕಾರಣಕ್ಕೂ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲು ಬಿಡುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನು ಪೊಲೀಸ್ ಇಲಾಖೆ ಕೂಡ ಈ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿಕೊಂಡ ವಿಠ್ಠಲ್ , ಒಂದು ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳಿಂದ ಅಸಭ್ಯ ವರ್ತನೆಗಳು ಕಂಡು ಬಂದಲ್ಲಿ ಅವರ ಪೋಷಕರಿಗೆ ಮಾಹಿತಿ ನೀಡಿದ ಬಳಿಕ ಮದುವೆ ಮಾಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಡಿಮೆ ಬೆಲೆಗೆ ವಿಮಾನದಲ್ಲಿ ಹಾರಾಡುತ್ತಲೇ ಪ್ರಪೋಸ್ ಮಾಡಿ: ಪ್ರೇಮಿಗಳಿಗೆ ಹೊಸ ಆಫರ್!

ಮುಂದಿನ ಸುದ್ದಿ »

ರೇಣುಕಾ ಚೌಧರಿ ಪರವಾಗಿ ಮೋದಿ ವಿರುದ್ಧ ಧ್ವನಿ ಎತ್ತಿದ್ದ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×