Saturday May 14 2016

Follow on us:

Contact Us

ಉತ್ತಮ ಆಡಳಿತ: ರಾಜ್ಯಕ್ಕೆ 3ನೇ ಸ್ಥಾನ; ಕೇರಳ ಪ್ರಥಮ ಸ್ಥಾನ

ನ್ಯೂಸ್ ಕನ್ನಡ ವರದಿ- ಬೆಂಗಳೂರು: ಆಡಳಿತದಲ್ಲಿ ಉತ್ತಮ ನಿರ್ವಹಣೆ ವಿಷಯಕ್ಕೆ ಸಂಬಂಧಿಸಿದಂತೆ ಕೇರಳವು ಮೊದಲ ಸ್ಥಾನ ಪಡೆದಿದ್ದರೆ, ಕರ್ನಾಟಕ ಮೂರನೇ ಸ್ಥಾನ ಗಳಿಸಿದೆ.

ದೇಶದ 29 ರಾಜ್ಯಗಳ ನಾನಾ ಇಲಾಖೆಗಳಿಂದ 3 ವರ್ಷಗಳ ಅಧಿಕೃತ ಮಾಹಿತಿ ಸಂಗ್ರಹಿಸಿ ಈ ಸ್ಥಾನಗಳನ್ನು ನೀಡಲಾಗಿದೆ. ಕೇರಳ, ತಮಿಳುನಾಡು ಕ್ರಮವಾಗಿ 1 ಮತ್ತು 2ನೇ ಸ್ಥಾನ ಪಡೆದಿದ್ದರೆ ರಾಜ್ಯವು 3ನೇ ಸ್ಥಾನ ಪಡೆದಿದೆ. ಬಿಹಾರ ಕೊನೆ ಸ್ಥಾನದಲ್ಲಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ, ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣ, ಅಪರಾಧ, ಮೂಲಸೌಕರ್ಯಗಳು ಮುಂತಾದ ಮಾನಂದಡಗಳ ಆಧಾರದಲ್ಲಿ ಈ ವರದಿಯನ್ನು ತಯಾರಿಸಲಾಗಿದೆ ಎಂದು ಈ ವರದಿ ತಯಾರಿಕೆಯ ನೇತೃತ್ವ ವಹಿಸಿರುವ ಐಎಎಸ್ ಅಧಿಕಾರಿ ಡಾ.ಸಿ.ಕೆ.ಮ್ಯಾಥ್ಯು ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಹಾಗೂ ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ಮೊದಲ ಸ್ಥಾನದಲ್ಲಿದ್ದರೆ, ರಾಷ್ಟ್ರ ರಾಜಧಾನಿ ದಿಲ್ಲಿ 3ನೇ ಸ್ಥಾನದಲ್ಲಿದೆ. ತ್ರಿಪುರಾ ಕೊನೆ ಸ್ಥಾನ ಪಡೆದಿದೆ. ಸರಕಾರೇತರ ಸಂಸ್ಥೆ ‘ಪಬ್ಲಿಕ್ ಅಫೈರ್ಸ್‌ ಸೆಂಟರ್(ಪಿಎಸಿ) ನಾನಾ ರಾಜ್ಯಗಳ ಆಡಳಿತ ಗುಣಮಟ್ಟ ಪ್ರಮಾಣ ತೋರಿಸುವ ‘ಸಾರ್ವಜನಿಕ ವ್ಯವಹಾರ ಸೂಚ್ಯಂಕ(ಪಿಎಐ)’ ವರದಿಯನ್ನು ಇಂದು ಬಿಡುಗಡೆ ಮಾಡಿದೆ.

nkdkm

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದಾವೂದ್ ಇಬ್ರಾಹೀಂ ಪಾಕಿಸ್ತಾನದಲ್ಲಿಯೇ ಇರುವುದು: ಪಿ.ಚಿದಂಬರಂ

ಮುಂದಿನ ಸುದ್ದಿ »

ಬಂದೂಕು ತೋರಿಸಿದ ಪೊಲೀಸ್, ಗ್ರಾಮಸ್ಥರ ಕ್ಷಮೇ ಕೇಳಿದ !

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×