Thursday October 19 2017

Follow on us:

Contact Us
    246

ಕರ್ನಾಟಕದ ಸಮಗ್ರ ಅಭಿವೃದ್ಧಿಯ ವೇದಿಕೆಯಾಗಿ ‘ವಿಷನ್ 2025’ ಕಾರ್ಯ ನಿರ್ವಹಣೆ: ರೇಣುಕಾ ಚಿದಂಬರಂ

ಕಾರವಾರ ನ್ಯೂಸ್ (ವರದಿ ಜ್ಯೋತಿ ರೇವಣಕರ್ ) ರಾಜ್ಯದ ಸಮಗ್ರ ಅಭಿವೃದ್ಧಿಯ ನಕಾಶೆ ಸಿದ್ದ ಪಡಿಸುವ ವೇದಿಕೆಯಾಗಿ ವಿಷನ್ 2025 ಕಾರ್ಯ ನಿರ್ವಹಿಸಲಿದೆ ಎಂದು ಸಾರ್ವಜನಿಕ ಇಲಾಖೆ ಉದ್ದಿಮೆಗಳ ಪ್ರಧಾನ ಕಾರ್ಯದರ್ಶಿ ರೇಣುಕಾ ಚಿದಂಬರಂ ಹೇಳಿದರು.
ವಿಷನ್ 2025 ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಆಗಿರುವ ಅವರು ಜಿಲ್ಲಾ ರಂಗಮಂದಿರದಲ್ಲಿ ಮಂಗಳವಾರ ನಡೆದ ವಿನೂತನ ನವ ಕರ್ನಾಟಕ ವಿಷನ್ 2025 ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ರಾಜ್ಯ ಸರಕಾರವು ಜನರಿಂದ ಸಲಹೆ ಪಡೆಯಲು ಜಿಲ್ಲಾ ಮಟ್ಟದಲ್ಲಿ ಚಿಂತನಾ ಸಭೆ ನಡೆಸುತ್ತಿದೆ. ಎಲ್ಲರ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಸಂಗ್ರಹಿಸಿ ಅದನ್ನು ಕ್ರೋಢೀಕರಿಸಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮುನ್ನೋಟವಾಗಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಈಗಾಗಲೇ 14 ಜಿಲ್ಲೆಗಳಲ್ಲಿ ಕಾರ್ಯಗಾರ ನಡೆಸಿ, ಅದರ ವರದಿಯನ್ನು ರಚಿಸಲಾಗಿದೆ ಎಂದರು.

ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕೂಡ ಜನಸಾಮಾನ್ಯರಿಂದ ಮಾಹಿತಿ ಪಡೆದು ಅದನ್ನು ದಾಖಲೀಸಿಕರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆಗಬೇಕಾದ ವಿವಿಧ ಕಾರ್ಯಗಳ ಬಗ್ಗೆ ಹಾಗೂ ಜನರ ಸಮಸ್ಯೆಗಳನ್ನು ಅರಿತು ಅದನ್ನು ಬಗೆಹರಿಸುವ ಪ್ರಯತ್ನ ನಡೆಸಲಾಗುತ್ತದೆ. ಸಾಮಾನ್ಯ ನಾಗರಿಕರೇ ಯೋಜನೆಯ ಕೇಂದ್ರವಾಗಿದ್ದು ತಜ್ಞರಿಂದ ಸಲಹೆ ಪಡೆದು ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತದೆ. ಈ ಯೋಜನೆ ಯಶಸ್ವಿಗೆ ಜನಸಾಮಾನ್ಯರು, ಚಿಂತಕರು ಕೇವಲ ಸಮಸ್ಯೆಗಳನ್ನಷ್ಟೆ ಹೇಳದೆ ಅದಕ್ಕೆ ಪರಿಹಾರೋಪಾಯಗಳು ಗೊತ್ತಿದ್ದಲ್ಲಿ ಅದನ್ನು ಕೂಡ ತಿಳಿಸಬೇಕು ಎಂದರು.

ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆ ಇದ್ದರೂ 12 ತಾಲೂಕುಗಳಲ್ಲಿ ಹಂಚಿ ಹೋಗಿದ್ದಾರೆ. ಹೀಗಾಗಿ ಸರಕಾರವು ಅನುದಾನವನ್ನು ಜನಸಂಖ್ಯೆ ಆಧಾರಿತವಾಗಿ ಬಿಡುಗಡೆ ಮಾಡುವುದುರಿಂದ ಅದು ಸಾಲುತ್ತಿಲ್ಲ. ಕರಾವಳಿ ಹಾಗೂ ಮಲೆನಾಡನ್ನು ಹೊಂದಿರುವ ಜಿಲ್ಲೆಗೆ ವಿಶೇಷ ಆದ್ಯತೆ ನೀಡಿ ಅನುದಾನ ನೀಡಬೇಕು. ಹೀಗೆ ವಿಶೇಷ ಪ್ಯಾಕೇಜ್ ನೀಡಿದರೆ ತ್ವರಿತ ಅಭಿವೃದ್ಧಿ ಸಾಧ್ಯವಿದೆ. ಜೊತೆಗೆ ಜಿಲ್ಲೆಯ 3 ತಾಲೂಕುಗಲಲ್ಲಿರುವ ಪ್ರಮುಖ ಬಂದರುಗಳ ಅಭಿವೃದ್ಧಿ, ಕೈಗಾರಿಕೆಗಳ ಸ್ಥಾಪನೆ ಆಗಿ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಬೇಕಿದೆ. ಜಿಲ್ಲೆಯ ಪ್ರಮುಖ ಉತ್ಪನ್ನಗಳನ್ನು ಹೊರ ಪ್ರಪಂಚಕ್ಕೆ ಪರಿಚಯಿಸಲು ಪ್ರೊಡಕ್ಟ್ ಆಫ್ ಉತ್ತರ ಕನ್ನಡ ಎಂಬ ಹೆಸರಿನಲ್ಲಿ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯ ಅಪ್ಪೆಮಿಡಿ, ಜೇನುತುಪ್ಪ ಮೊದಲಾದ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಮಾರಾಟವನ್ನು ಇಲ್ಲಿ ನಡೆಸುವದರ ಮೂಲಕ ಜನರ ಏಳಿಗೆಗೆ ಜಿಲ್ಲಾಡಳಿತ ಶ್ರಮಿಸಲಿದೆ ಎಂದು ಹೇಳಿದರು.

ಶಾಸಕ ಸತೀಶ್ ಸೈಲ್ ಮಾತನಾಡಿ ಪ್ರವಾಸಿತಾಣಗಳನ್ನೊಳಗೊಂಡ ಜಿಲ್ಲೆಯು ನೆರೆಯ ಗೋವಾ ಹಾಗೂ ಕೆರಳ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಹೇರಳ ಅವಕಾಶವಿದೆ. ಕಾಳಿ ನದಿಯ ಹಿನ್ನೀರಿನ ದಡದಲ್ಲಿ ಉತ್ತಮ ಪ್ರವಾಸಿ ತಾಣಗಳನ್ನು ನಿರ್ಮಿಸಲು ಅವಕಾಶಗಳಿವೆ. ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡಬೇಕಾಗಿದೆ. ಗಡಿಭಾಗವಾಗಿರುವ ಕಾರವಾರ ನಗರವನ್ನು ಸ್ಮಾರ್ಟ್ ಸಿಟಿ ಮಾಡುವ ಅವಶ್ಯಕತೆ ಇದೆ. ಕೃಷಿ ಭೂಮಿಗಳು ಉಪ್ಪು ನೀರಿನಿಂದ ಬಂಜರು ಬಿದ್ದಿದ್ದು ಅದಕ್ಕೆ ಬಾಂದಾರ ಸೇರಿದಂತೆ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್ ಮಾತನಾಡಿ ಜಿಲ್ಲೆಯಲ್ಲಿ ಅರಣ್ಯ ಪ್ರದೇಶವೇ ಹೆಚ್ಚಾಗಿರುವ ಕಾರಣ ಹೆಚ್ಚಿನ ಜನರು ಅರಣ್ಯ ವ್ಯಾಪ್ತಿಯಲ್ಲಿಯೇ ವಾಸಿಸುತ್ತಿದ್ದಾರೆ. ಸರಕಾರವು ಫಲಾನುಭವಿಗಳಿಗೆ ಕೊಡಮಾಡುವ ಅನೇಕ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಕೆಲವು ನಿಯಮಗಳು ಇವರಿಗೆ ದೊರೆಯದಂತೆ ಮಾಡುತ್ತವೆ. ಆದ್ದರಿಂದ ಜಿಲ್ಲೆಯನ್ನು ವಿಶೇಷ ಜಿಲ್ಲೆ ಎಂದು ಪರಿಗಣಿಸಿ ಇಲ್ಲಿನ ಫಲಾನುಭವಿಗಳಿಗೆ ನಿಯಮಗಳಲ್ಲಿ ವಿನಾಯಿತಿ ನೀಡಬೇಕು. ಅಲ್ಲದೆ ಜಿಲ್ಲೆಗೆ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್, ಜಿಪಂ ಸಿಇಓ ಚಂದ್ರಶೇಖರ ನಾಯಕ ಇದ್ದರು.

ಸಭಾ ಕಾರ್ಯಕ್ರಮದ ಸರಕಾರಿ ಪದವಿ ಕಾಲೇಜಿನ ಕೊಠಡಿಗಳಲ್ಲಿ ಬಳಿಕ 5 ಗುಂಪುಗಳನ್ನು ರಚಿಸಿಕೊಂಡು ಚರ್ಚೆ ನಡೆಸಲಾಯಿತು. ಪ್ರಮುಖವಾಗಿ ನಗರದ ಮೂಲ ಸೌಕರ್ಯ ಹಾಗೂ ಸ್ಮಾರ್ಟ್ ಸಿಟಿ, ಸಾಮಾಜಿಕ ನ್ಯಾಯ ಆರೋಗ್ಯ ಮತ್ತು ಶಿಕ್ಷಣ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ಕೈಗಾರಿಕೆ, ಉದ್ಯೋಗ ಸೃಷ್ಟಿ, ಆಡಳಿತ ಕಾನೂನು ಮತ್ತು ನ್ಯಾಯದ ಕುರಿತು ತಜ್ಞರು ವಿಷಯ ಮಂಡಿಸಿದರು. ಆದರೆ ಕೆಲವರು ಜಿಲ್ಲೆಯ ಸಮಗ್ರ ರೂಪರೇಷೆ ಸಿದ್ದಪಡಿಸುತ್ತಿರುವ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಅವಶ್ಯಕ ಆಸನದ ವ್ಯವಸ್ಥೆ ಕಲ್ಪಿಸಿರಲಿಲ್ಲ. ಹಾಗೂ ಕೊಠಡಿಗಳಲ್ಲಿ ಸೂಕ್ತ ಸ್ಥಳಾವಕಾಶವೂ ಇರಲಿಲ್ಲ ಎಂದು ಕೆಲವರು ಅಸಮಾಧಾನ ವ್ಯಕ್ತಡಿಸುತ್ತಿರುವುದು ಕಂಡು ಬಂದಿತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದೇವಸ್ಥಾನದ ಅರ್ಚಕರನ್ನು ಮದುವೆಯಾದರೆ ಬರೋಬ್ಬರಿ 3ಲಕ್ಷರೂ. ಆಫರ್!

ಮುಂದಿನ ಸುದ್ದಿ »

ಕೊಹ್ಲಿಯ ಪ್ರಶಂಸೆಗೊಳಗಾದ ಪಾಕಿಸ್ತಾನದ ವೇಗಿ ಹೇಳಿದ್ದೇನು ಗೊತ್ತೇ?

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×