Friday January 6 2017

Follow on us:

Contact Us
5
    193

ವೈದ್ಯರಿಗೆ ಹಲ್ಲೆ ನಡೆಸಿದ ಸಂಸದರ ಮೇಲೆ ದೂರು

ನ್ಯೂಸ್ ಕನ್ನಡ ವರದಿ (6-1-17): ಕಾರವಾರ: ಶಿರಸಿಯ ಟಿಎಸ್‍.ಎಸ್ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಬಗ್ಗೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ. ದೇವರಾಜ ತಿಳಿಸಿದ್ದಾರೆ.

ಸಂಸದರು ತಮ್ಮ ತಾಯಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿಲ್ಲ ಎನ್ನುವ ಆಸ್ಪತ್ರೆಯ ಮೂವರ ವಿರುದ್ಧ ಹಲ್ಲೆ ನಡೆಸಿದ್ದರು. ಇದು ಆಸ್ಪತ್ರೆಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ವೈದ್ಯರು ಹಾಗೂ ಸಂಸದರ ನಡುವೆ ರಾಜಿ ಸಂಧಾನವಾದ್ದರಿಂದ ಯಾವುದೇ ದೂರು ದಾಖಲಾಗಿರಲಿಲ್ಲ.

ಈ ಬಗ್ಗೆ ಸಾರ್ವಜನಿಕವಾಗಿ ತೀವ್ರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವರ ಹಾಗೂ ಪೊಲೀಸ್ ಮಹಾನಿರ್ದೇಶಕರ ಸೂಚನೆಯಂತೆ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅವರು ನಿರಾಕರಿಸಿದರು.

ಪ್ರಕರಣಕ್ಕೆ ಸಂಬಂದಿಸಿದಂತೆ ಸೆಕ್ಷನ್ 323, 504, 347ರ ಅಡಿಯಲ್ಲಿ ಮತ್ತು ಕರ್ನಾಟಕ ಮೆಡಿಕಲ್ ಕೇರ್ ಪರ್ಸನಲ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

nksbkhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಬಡವರಿಗೆ ಸವಲತ್ತು ವಿತರಣೆ

ಮುಂದಿನ ಸುದ್ದಿ »

ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ: ಸ್ಥಾನ ಗಿಟ್ಟಿಸಿಕೊಂಡ ಹಳೆ ಹುಲಿ

ಸಿನೆಮಾ

  • marali

    “ಮರಳಿ ಮನೆಗೆ” ಧ್ವನಿಸುರುಳಿ ಬಿಡುಗಡೆ ಸಂಭ್ರಮ

    February 24, 2017

    ನ್ಯೂಸ್ ಕನ್ನಡ(24-2-2017): ಖ್ಯಾತ ಬರಹಗಾರ, ಚಿಂತಕ, ರಂಗಕರ್ಮಿ ಯೋಗೇಶ್ ಮಾಸ್ಟರ್ ನಿರ್ದೇಶನದ ಚೊಚ್ಚಲ ಚಲನಚಿತ್ರ “ಮರಳಿ ಮನೆಗೆ”ಯ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಯೋಗೇಶ್ ಮಾಸ್ಟರ್ ನಾದಬ್ರಹ್ಮ ಹಂಸಲೇಖ ಅವರು “ದೇಸಿ ಸಂಗೀತದ ...

    Read More
  • bhavana

    ನಟಿ ಭಾವನಾರನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದವನ ಬಂಧನ

    February 18, 2017

    ನ್ಯೂಸ್ ಕನ್ನಡ(18-2-2017): ಚಿತ್ರನಟಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಳಂನಲ್ಲಿ ಭಾವನಾ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವನಾ ಅವರ ಕಾರು ಚಾಲಕನಾಗಿದ್ದ ...

    Read More
  • Marali Manege

    ಸೆನ್ಸಾರ್ ಮಂಡಳಿಯವರನ್ನೂ ಕಣ್ಣೀರು ಹಾಕಿಸಿದ ಚಿತ್ರ ಬಿಡುಗಡೆಗೆ ಸಿದ್ಧ

    February 16, 2017

    ಯೋಗೇಶ್ ಮಾಸ್ಟರ್ ನಿರ್ದೇಶನದ ಚಿತ್ರ ಸಂಘಪರಿವಾರ-ಪ್ರಗತಿಪರರ ಅಭಿಪ್ರಾಯವನ್ನೂ ಬದಲಿಸಬಹುದಂತೆ ನ್ಯೂಸ್ ಕನ್ನಡ ವರದಿ(16.02.2017)-ಮಂಗಳೂರು: ಯೋಗೇಶ್ ಮಾಸ್ಟರ್ ಅವರು ನಿರ್ದೇಶಿಸಿರುವ ‘ಮರಳಿ ಮನೆಗೆ’ ಕನ್ನಡ ಚಿತ್ರವು ಇದೀಗ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, ನಾಯಕರ ವೈಭವೀಕರಣದ ಚಿತ್ರಗಳನ್ನೇ ನೋಡಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×