Tuesday November 14 2017

Follow on us:

Contact Us
    374

ಪಡುಬಿದ್ರಿ; ರಾತೋ ರಾತ್ರಿ ಸುಜ್ಲಾನ್ ಕಂಪನಿ ಲಾಕೌಟ್: ಕಂಪನಿ ಮುಂಭಾಗದಲ್ಲಿ ಕಾರ್ಮಿಕರ ಪ್ರತಿಭಟನೆ

ನ್ಯೂಸ್ ಕನ್ನಡ ವರದಿ(14.11.2017): ಪಡುಬಿದ್ರಿ:  ಸುಜ್ಲಾನ್ ಕಂಪನಿಯನ್ನು ಆರ್ಥಿಕ ಸಂಕಷ್ಟದ ಕಾರಣ ನೀಡಿ ರಾತೋ ರಾತ್ರಿ ಲಾಕೌಟ್ ಮಾಡಲಾಗಿದೆ. ಸುಮಾರು 600 ಅಧಿಕ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಲಾಕೌಟ್ ಮಾಡಿರುವುದನ್ನು ವಿರೋಧಿಸಿ ಕಂಪನಿ ಮುಂಭಾಗದಲ್ಲಿ ಮುಂಜಾನೆ ನೂರಾರು ಕಾರ್ಮಿಕರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನಾ ನಿರತರಲ್ಲಿ ಅಧಿಕಾರಿಗಳು ಮಾತುಕತೆಗೆ ಬಾರದಿರುವುದನ್ನು ಕಂಡ ಪ್ರತಿಭಟನಾಕಾರರು ವಿಚಾರವನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದಿದ್ದಾರೆ.

ಘಟನೆ ಬಗ್ಗೆ ಮಾತುಕತೆಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸುಜ್ಲಾನ್ ಕಂಪನಿ ಅಧಿಕಾರಿಗಳು ಮತ್ತು  ಪ್ರತಿಭಟನೆಗೆ ಸಾಥ್ ನೀಡಿದ ಸ್ಥಳೀಯ ವಿವಿಧ ಪಕ್ಷದ ಮುಖಂಡರು ಹಾಗು ಕಾರ್ಮಿಕ  ನಾಯಕರನ್ನು ಕರೆಸಿ ಸಭೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಕಂಪನಿಯ ಬೇಜವಾಬ್ದಾರಿಯುತ ಲಾಕೌಟ್ ನಿರ್ಧಾರದಿಂದ ಅಸಮಾಧಾನಗೊಂಡ ಡಿಸಿ ಪ್ರಿಯಾಂಕಾರವರು ಸುಜ್ಲಾನ್ ಇನ್ಫ್ರಾಸ್ಟ್ರಕ್ಚರ್ ಮುಖ್ಯಸ್ಥ ದಕ್ಷಿಣ ಮೂರ್ತಿ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ಫಿಲಿಪ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರ್ಕಾರದ ಪೂರ್ಣ ಸವಲತ್ತುಗಳನ್ನು ಬಳಸಿಕೊಂಡು ಉದ್ದಿಮೆಯನ್ನು ನಡೆಸುತ್ತಿರುವುದು ಸುಜ್ಲಾನ್ ಕಂಪೆನಿ ಏಕಾಏಕಿ ಲಾಕೌಟ್ ಮಾಡಿರುವುದು ಸರಿಯಲ್ಲ .ಲಾಕೌಟ್ ಹಿಂಪಡೆದು ಎಲ್ಲಾ ಕಾರ್ಮಿಕರನ್ನು ಕೆಲಸಕ್ಕೆ ಮರುನೇಮಕ ಮಾಡಬೇಕು ಇಲ್ಲದಿದ್ದಲ್ಲಿ ಸರ್ಕಾರ ಕೊಟ್ಟಂತಹ ಭೂಮಿಯನ್ನು ಮರಳಿ ಪಡೆದು ಕೊಳ್ಳುವುದಾಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಎಂ. ಪಾಟೀಲ್ ಮಾತನಾಡಿ, ಜಿಲ್ಲಾಡಳಿತವು ಕಾರ್ಮಿಕರ ಪರವಾಗಿದೆ. ಎಸ್ಇಝಡ್ ಡೆಪ್ಯೂಟಿ ಕಮೀಷನರ್ ಕೇರಳದ ಕೊಚ್ಚಿಯಲ್ಲಿದ್ದು ಅವರು ಸ್ಥಳಕ್ಕಾಗಮಿಸಿ ಅವರೊಂದಿಗೆ ಕಂಪನಿಗೆ ಭೇಟಿ ನೀಡಲಿದ್ದೇವೆ ಎಂದಿದ್ದಾರೆ.

ಕಾರ್ಮಿಕ ಇಲಾಖೆಯ ಅಧಿಕಾರಿ ವಿಶ್ವನಾಥ್, ರಾಮ ಮೂರ್ತಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ತಾಲ್ಲೂಕು ಪಂಚಾಯತ್ ಸದಸ್ಯ ದಿನೇಶ್ ಕೋಟ್ಯಾನ್, ಇಂಟಕ್ ಜಿಲ್ಲಾಧ್ಯಕ್ಷ ಗಣೇಶ್ ಕೋಟ್ಯಾನ್, ಉಪಾಧ್ಯಕ್ಷ ಧೀರಜ್ ಹುಸೈನ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಿಥುನ್ ಹೆಗ್ಡೆ ಉಪಸಸ್ಥಿತರಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಭಾರತದ ಯೋಗಕ್ಕೆ ಕ್ರೀಡಾ ಮಾನ್ಯತೆ ನೀಡಿದ ಸೌದಿ ಅರೇಬಿಯಾ ಸರಕಾರ

ಮುಂದಿನ ಸುದ್ದಿ »

ಗೋರಕ್ಷಕರು ಗುಂಡಿಕ್ಕಿ ಕೊಂದ ವ್ಯಕ್ತಿಯ ವಿರುದ್ಧವೇ ಗೋಕಳ್ಳಸಾಗಾಣಿಕೆ ಪ್ರಕರಣ ದಾಖಲು!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×