ಮೀಸಲಾತಿ ಮೂಲಭೂತ ಹಕ್ಕಲ್ಲ; ಸುಪ್ರೀಂಕೋರ್ಟ್ ತೀರ್ಪು: ಮಲ್ಲಿಕಾರ್ಜುನ ಖರ್ಗೆ ಖಂಡನೆ

0
18

ನ್ಯೂಸ್ ಕನ್ನಡ ವರದಿ: ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪನ್ನು ಖಂಡಿಸುವುದಾಗಿ ಹೇಳಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟರ ಹಕ್ಕು ಮೊಟಕುಗೊಳಿಸುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿದ್ದು, ಬಿಜೆಪಿ ಸರ್ಕಾರ ಇರುವ ಕಡೆ ಇಂಥ ಪ್ರಯತ್ನ ನಡೆಯುತ್ತಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇಡೀ ದೇಶ ತಲ್ಲಣಗೊಳ್ಳುವ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಮೀಸಲಾತಿ ನೀಡುವುದು ರಾಜ್ಯ ಸರ್ಕಾರಗಳಿಗೆ ಬಿಟ್ಟ ವಿಚಾರ ಎಂದು ಹೇಳಿರುವುದು ದೇಶವನ್ನು ತಪ್ಪು ದಾರಿಗೆ ಎಳೆಯುವಂತೆ ಇದ್ದು ಇದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದಂತೆ ಸಂವಿಧಾನದ 16ನೇ ವಿಧಿ ಇದೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಚ್ಚರಿ ಮೂಡಿಸುವಂತಿದೆ.

ದೇಶದಲ್ಲಿ ಪರಿಶಿಷ್ಟರ ಹಕ್ಕು ಮೊಟಕುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಪರಿಶಿಷ್ಟ ಸಮುದಾಯದವರಿಗೆ ಮೂಲಭೂತ ಮೀಸಲಾತಿ ಹಕ್ಕೇ ಇಲ್ಲ ಎಂದರೆ ಎಲ್ಲಿಗೆ ಹೋಗಬೇಕು? ಸಾಮಾಜಿಕ ನ್ಯಾಯಕ್ಕೆ ಕೊಡಲಿ ಪೆಟ್ಟು ನೀಡುವುದು ಸರಿಯಲ್ಲ. ಇದರ ಬಗ್ಗೆ ಸಂಸತ್ತು ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here