ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಆಯ್ಕೆ!: ಅಧಿಕೃತ ಘೋಷಣೆ ಒಂದೇ ಬಾಕಿ?

0
63

ನ್ಯೂಸ್ ಕನ್ನಡ ವರದಿ: ರಾಜ್ಯದ 15 ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಪ್ರಬಲ ನಾಯಕನನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ ಎನ್ನಲಾಗಿದ್ದು , ಶೀಘ್ರದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ .

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ನಾಯಕನನ್ನು ನೇಮಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರ್ನಾಟಕದ ಪ್ರಮುಖ ಮುಖಂಡರನ್ನು ಕರೆದು ಚರ್ಚೆ ನಡೆಸಿದ್ದು , ಅಂತಿಮ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು , ದಿನೇಶ್ ಗುಂಡೂರಾವ್ , ಸಿದ್ದರಾಮಯ್ಯ ಅವರು ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು , ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ . ಕೆ . ಶಿವಕುಮಾರ್ ಅವರ ಹೆಸರನ್ನು ಸೋನಿಯಾ ಗಾಂಧಿ ಫೈನಲ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ .

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಗಾಗಿ ಹೈಕಮಾಂಡ್ ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಿತ್ತು . ಮಧುಸೂದನ್ ಮಿಸ್ತ್ರಿ ಮತ್ತು ಭಕ್ತಚರಣ್ ದಾಸ್ ಅವರನ್ನೊಳಗೊಂಡ ವೀಕ್ಷಕರ ತಂಡ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದೆ ಎನ್ನಲಾಗಿದೆ . ಡಿ . ಕೆ . ಶಿವಕುಮಾರ್ ಪರವಾಗಿ ಹೈಕಮಾಂಡ್ ಗೆ ವರದಿ ನೀಡಿದ್ದು , ಸಂಕ್ರಾಂತಿ ವೇಳೆಗೆ ನೇಮಕಾತಿ ಅಧಿಕೃತ ಅದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ .

LEAVE A REPLY

Please enter your comment!
Please enter your name here