ಕೆಪಿಸಿಸಿಗೆ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ

0
72

ನ್ಯೂಸ್ ಕನ್ನಡ ವರದಿ: ಕೆಪಿಸಿಸಿಗೆ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಕರ್ನಾಟಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಕೊನೆಗೂ ಡಿಕೆ ಶಿವಕುಮಾರ್ ಅವರು ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ರಾಜ್ಯದಲ್ಲಿ ತೀವ್ರ ಪೈಪೊಟಿ ಏರ್ಪಟ್ಟಿತ್ತು. ಹೆಚ್ ಕೆ ಪಾಟೀಲ್, ಜಿ.ಪರಮೇಶ್ವರ್ ಸೇರಿದಂತೆ ಅನೇಕರ ನಡುವೆ ಪೈಪೋಟಿ ಉಂಟಾಗಿದೆ ಎನ್ನಲಾಗುತ್ತಿತ್ತು. ಆದ್ರೇ ಕೊನೆಗೂ ಈ ಹುದ್ದೆಯ ಮುಂಜೂಣಿಯಲ್ಲಿದ್ದಂತ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ ಜನರಲ್ ಸೆಕ್ರೇಟರಿ ಕೆಸಿ ವೇಣುಗೋಪಾಲ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನು, ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನೂ ಮುಂದುವರೆದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆಸಿರುವ ಎಐಸಿಸಿ, ವಿಧಾಸಭೆಯ ಮುಖ್ಯ ಸಚೇತಕರಾಗಿ ಅಜಯ್ ಸಿಂಗ್, ವಿಧಾನ ಪರಿಷತ್ ನ ಮುಖ್ಯ ಸಚೇತಕರಾಗಿ ಎಂ ಎಲ್ ಸಿ ಎಂ.ನಾರಾಯಣಸ್ವಾಮಿಯವರನ್ನು ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here