ನಾನು ಮೀಸಲಿಟ್ಟ ಹಣದಲ್ಲಿ ತಾತ್ಕಾಲಿಕವಾಗಿ ನೆರೆ ಸಂತ್ರಸ್ತರ ನೆರವಿಗೆ ಬಳಸಬಹುದು: ಕುಮಾರಸ್ವಾಮಿ

0
286

ನ್ಯೂಸ್ ಕನ್ನಡ ವರದಿ: ‘ನೆರೆ ಸಂತ್ರಸ್ತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವವನ್ನೇ ಕಳೆದುಕೊಂಡಿದ್ದು, ಬಹುಶಃ ಜಾತಿಯ ವ್ಯಾಮೋಹಕ್ಕೆ ಸಿಲುಕಿ ಸುಮ್ಮನಾಗಿರಬಹುದು’ ಎಂದು ಜೆಡಿಎಸ್‌ ಶಾಸಕ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಪ್ರವಾಹಪೀಡಿತರಿಗೆ, ಇದುವರೆಗೂ ಕೇಂದ್ರ ಸರ್ಕಾರದಿಂದ ಬಿಡಿಗಾಸೂ ಸಿಕ್ಕಿಲ್ಲ. ಅದೇ ಒಂದು ವೇಳೆ ನಾನು ಅಧಿಕಾರದಲ್ಲಿ ಇದ್ದಿದ್ದರೆ, ಇಷ್ಟೊತ್ತಿಗಾಗಲೇ ‘ಎಲ್ಲಿದ್ದೀಯೋ ಕುಮಾರ?’ ಅನ್ನೋರು!’ ಎಂದು ಕುಟುಕಿದರು.

ಸಾಲಮನ್ನಾಕ್ಕಾಗಿ ಮೀಸಲಿಟ್ಟಿದ್ದ ಅನುದಾನದಲ್ಲೇ ಉಳಿದಿರುವ ₹ 4000 ಕೋಟಿ-₹ 5000 ಕೋಟಿ ಹಣವನ್ನೇ ತಾತ್ಕಾಲಿಕವಾಗಿ ನೆರೆ ಸಂತ್ರಸ್ತರ ನೆರವಿಗಾಗಿ ಬಳಸಿಕೊಳ್ಳಬಹುದು. ಈ ಸರ್ಕಾರ ಅದನ್ನೂ ಮಾಡುತ್ತಿಲ್ಲ’ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here