ಜೂನ್ 1 ರವರೆಗೆ ಲಾಕ್ ಡೌನ್ ವಿಸ್ತರಣೆ: ಪ್ರಧಾನಿಯಿಂದ ಮಹತ್ವದ ಘೋಷಣೆ

0
1186

ನ್ಯೂಸ್ ಕನ್ನಡ ವರದಿ: ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 1 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗುವುದು ಎಂದು ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಘೋಷಣೆ ಮಾಡಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಆದರೆ ಕೊರೊನಾ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 1 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ಕಠಿಣ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಹೇಳಿದರು.

ಲಾಕ್ ಡೌನ್ ಜಾರಿಯಾದ 7 ವಾರಗಳ ನಂತರ ಬ್ರಿಟನ್ ನಲ್ಲಿ ಸುಮಾರು 31,800 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಹೀಗಾಗಿ ಲಾಕ್ ಸಡಿಲಗೊಳಿಸುವ ಸಮಯ ಇದಲ್ಲ.

LEAVE A REPLY

Please enter your comment!
Please enter your name here