ರಾಜ್ಯದ ಜನರೇ ಮತ್ತೊಂದು ಸುತ್ತಿನ ಲಾಕ್‌ಡೌನ್‌ಗೆ ರೆಡಿಯಾಗಿ.!

0
237

ನ್ಯೂಸ್ ಕನ್ನಡ ವರದಿ: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ ಡೌನ್ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಿಲ್ಲರ್ ಕೊರೊನಾ ಆರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ ಮತ್ತೊಂದು ಸುತ್ತಿನ ಲಾಕ್ ಡೌನ್ ವಿಧಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವರ ಜೊತೆ ನಡೆದ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಲಾಕ್ ಡೌನ್ ಕುರಿತ ತಜ್ಞರ ಸಮಿತಿಯು ಕೊರೊನಾ ಸೋಂಕು ಪ್ರಕರಣಗಳು ಗಂಭೀರ ಪ್ರಮಾಣದಲ್ಲಿ ಹೆಚ್ಚಾದರೆ ಲಾಕ್ ಡೌನ್ ಮುಂದುವರೆಸುವುದನ್ನು ನಮ್ಮ ಅಸ್ತ್ರವನ್ನಾಗಿ ಮಾಡಿಕೊಳ್ಳುವ ಅನಿವಾರ್ಯತೆ ಇದೆ ಎಂದು ಹೇಳಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here