ಮಹಾರಾಷ್ಟ್ರ ಚುನಾವಣೆ: ಸಾವರ್ಕರ್ ಗೆ ಭಾರತ ರತ್ನ ಶಿಫಾರಸು, BJP ಪ್ರಣಾಳಿಕೆ ಬಿಡುಗಡೆ..!

0
171

ನ್ಯೂಸ್ ಕನ್ನಡ ವರದಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಮಂಗಳವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಒಂದು ಕೋಟಿ ಉದ್ಯೋಗ, ಮೌಲ್ಯಾಧಾರಿತ ಶಿಕ್ಷಣ ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದೆ.

ಅಲ್ಲದೇ ಜ್ಯೋತಿ ರಾವ್ ಫುಲೆ, ಪತ್ನಿ ಸಾವಿತ್ರಿಭಾಯಿ ಫುಲೆ ಹಾಗೂ ವಿಡಿ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡಲು ಶಿಫಾರಸು ಮಾಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ವಿವರಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಅಧ್ಯಕ್ಷ ಜೆಪಿ ನಡ್ಡಾ 44 ಪುಟಗಳ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

LEAVE A REPLY

Please enter your comment!
Please enter your name here