ನಾವಿದನ್ನೆಲ್ಲಾ ನೆನಪಿಟ್ಟುಕೊಳ್ಳುತ್ತೇವೆ: ಕಾಂಗ್ರೆಸ್ ಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ!

0
347
New Delhi: West Bengal Chief Minister Mamata Banerjee addresses a mass rally against demonetisation of currency notes, at Azadpur Mandi in New Delhi on Thursday. PTI Photo by Shahbaz Khan (PTI11_17_2016_000175A)

ನ್ಯೂಸ್ ಕನ್ನಡ ವರದಿ : ಬುಧವಾರ ಲೋಕಸಭೆ ಕಲಾಪದಲ್ಲಿ ಪಶ್ಚಿಮ ಬಂಗಾಳದ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧುರಿ ಮಾತನಾಡಿ, ಶಾರದಾ ಚಿಟ್‌ಫಂಡ್‌ ಹಗರಣದಲ್ಲಿ ಮಮತಾ ಬ್ಯಾನರ್ಜಿ ನೇರವಾಗಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರನ್ನು ಲೂಟಿ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಈ ಹಿನ್ನೆಲೆಯಲ್ಲಿ ಹಗರಣದಲ್ಲಿ ತಮ್ಮ ವಿರುದ್ಧ ಕಾಂಗ್ರೆಸ್‌ ನಾಯಕರು ವಾಗ್ದಾಳಿ ನಡೆಸಿದ್ದಕ್ಕೆ ಕ್ರುದ್ಧರಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ನಾವಿದನ್ನು ನೆನಪಿಟ್ಟುಕೊಳ್ಳುತ್ತೇವೆ’ ಎಂದು ಮುಖಕ್ಕೆ ಹೊಡೆದಂತೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಹೇಳಿದ್ದಾರೆ.

ಇದಕ್ಕೂ ಮುನ್ನ ಸಂಸತ್ತಿನಲ್ಲಿ ಅಧೀರ್‌ ರಂಜನ್‌ ಚೌಧುರಿ ಅವರು ಮಮತಾ ಹಾಗೂ ಅವರ ಪಕ್ಷ ಟಿಎಂಸಿ ವಿರುದ್ಧ ನಡೆಸಿದ ವಾಗ್ದಾಳಿಗೆ ಬಿಜೆಪಿ ಸಂಸದರು ಮೇಜು ಕುಟ್ಟಿಮೆಚ್ಚುಗೆ ವ್ಯಕ್ತಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಾದೇಶಿಕ ಪಕ್ಷಗಳು ರೂಪಿಸಿರುವ ಮಹಾಗಠಬಂಧನದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಿಸಿಕೊಳ್ಳುವ ವಿಚಾರ ಡೋಲಾಯಮಾನ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ‘ಮಮತಾ-ಸೋನಿಯಾ ಘರ್ಷಣೆ’ ಮಹತ್ವ ಪಡೆದಿದೆ. ಇತ್ತೀಚೆಗೆ ಬಂಗಾಳದಲ್ಲಿ ಮಮತಾ ನಡೆಸಿದ್ದ ಮಹಾಗಠಬಂಧನ ಸಮಾವೇಶಕ್ಕೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ತೆರಳಿದ್ದರು.

ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧುರಿ ವಾಗ್ದಾಳಿ ನಡೆಸಿದ ನಂತರ ಸ್ವಲ್ಪ ಹೊತ್ತಿನಲ್ಲೇ ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಮಮತಾ ಬ್ಯಾನರ್ಜಿ ಹಾಗೂ ಸೋನಿಯಾ ಗಾಂಧಿ ಎದುರುಬದುರಾದರು. ಆಗ ಸೋನಿಯಾ ಅವರೇ ಮಮತಾರನ್ನು ಮಾತನಾಡಿಸಿ, ‘ನಾವು ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದರೂ ಸ್ನೇಹಿತರೇ’ ಎಂದರು. ಅದಕ್ಕೆ ಸಿಟ್ಟಿನಿಂದ ಉತ್ತರ ನೀಡಿದ ಮಮತಾ, ‘ನಾವಿದನ್ನು ನೆನಪಿಟ್ಟುಕೊಳ್ಳುತ್ತೇವೆ’ ಎಂದು ಹೇಳಿ ಅಲ್ಲಿಂದ ತೆರಳಿದರು.

LEAVE A REPLY

Please enter your comment!
Please enter your name here