ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

0
62

ನ್ಯೂಸ್ ಕನ್ನಡ ವರದಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಭಾಷಣ ಮಾಡಲಿದ್ದಾರೆ. ಮೇ 17ಕ್ಕೆ ಲಾಕ್​ಡೌನ್ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಮೋದಿ ಭಾಷಣ ಮಹತ್ವ ಪಡೆದುಕೊಂಡಿದೆ. ಲಾಕ್​ಡೌನ್​​ ಅನ್ನು ವಿಸ್ತರಣೆ ಮಾಡುವುದೋ? ಬೇಡವೋ ಎಂಬ ಬಗ್ಗೆ ಮೋದಿ ಘೋಷಣೆ ಮಾಡುವ ಸಾಧ್ಯತೆಯಿದೆ.

ನಿನ್ನೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಂವಾದ ನಡೆಸಿದ್ದರು. ದೇಶದ ಆರ್ಥಿಕತೆ ಹಿತದೃಷ್ಟಿಯಿಂದ ಲಾಕ್​ಡೌನ್ ಸಡಿಲಿಕೆ ಮಾಡುವಂತೆ ಹಲವು ರಾಜ್ಯಗಳ ಸಿಎಂಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಭಾಷಣ ಬಹಳ ಮಹತ್ವ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here