‘ಮೋದಿ ವಿರುದ್ಧ ಮಾತನಾಡುವವರನ್ನು ಜೀವಂತ ಸುಡಲಾಗುವುದು’: ವಿವಾದಾತ್ಮಾಕ ಹೇಳಿಕೆ ನೀಡಿದ ಬಿಜೆಪಿ ನಾಯಕ

0
10

ನ್ಯೂಸ್ ಕನ್ನಡ ವರದಿ: “ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ವಿರುದ್ಧ ಮಾತನಾಡಿದವರನ್ನು ಜೀವಂತ ಸುಡಲಾಗುವುದು’ ಎಂದು ಉತ್ತರ ಪ್ರದೇಶದ ಕಾರ್ಮಿಕ ಸಚಿವ ರಘುರಾಜ್ ಸಿಂಗ್ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಉತ್ತರ ಪ್ರದೇಶದ ಆಲಿಘಡದಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಶೇ 1 ರಷ್ಟು ಜನ ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿದ್ದಾರೆ. ಈ ವಿರೋಧವನ್ನೇ ಕೆಲವರು ಬಿಜೆಪಿ ವಿರುದ್ಧ ಜನರನ್ನು ಎತ್ತಿ ಕಟ್ಟಲು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ತೆರಿಗೆ ಹಣ ತಿಂದು ನಮ್ಮ ನಾಯಕರ ವಿರುದ್ಧವೇ ಘೋಷಣೆ ಕೂಗುತ್ತಾರೆ. ಇದನ್ನು ಸಹಿಸಲಾಗುವುದಿಲ್ಲ. ಒಂದು ವೇಳೆ ವಿರುದ್ಧ ಘೋಷಣೆಗಳು ಹೊರ ಬಿದ್ದರೇ ಅಂತವರನ್ನು ಜೀವ ಸಹಿತ ಸುಟ್ಟು ಹಾಕುತ್ತೇವೆ’ ಎಂದು ಹೇಳಿದರು.

ಆಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಸಿಎಎ ವಿರುದ್ಧ ಇತ್ತೀಚೆಗೆ ಸಮಾವೇಶ ಆಯೋಜಿಸಿದ್ದಾಗ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಇದರಿಂದ ಕುಪಿತಗೊಂಡು ರಘುರಾಜ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here