ಕೊನೆಗೂ ಪತ್ತೆಯಾಯ್ತು ಸಿದ್ಧಾರ್ಥ್ ಮೃತದೇಹ! ಪತ್ತೆಯಾಗಿದ್ದು ಎಲ್ಲಿ ಗೊತ್ತೇ?

0
868

ನ್ಯೂಸ್ ಕನ್ನಡ ವರದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಮಾಲಕ ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗಿದೆ. ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ಆ ಬಳಿಕ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನದಿಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ಮೀನುಗಾರರು ಗಮನಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ.

LEAVE A REPLY

Please enter your comment!
Please enter your name here