ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ: ತಪ್ಪೊಪ್ಪಿಕೊಂಡ ಆದಿತ್ಯ ರಾವ್..!

0
89

ನ್ಯೂಸ್ ಕನ್ನಡ ವರದಿ: ಮಂಗಳೂರು ವಿಮಾನನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದು, ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಈ ವೇಳೆ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಆರೋಪಿ ಆದಿತ್ಯ ರಾವ್ ನಾನೇ ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದು ಎಂದು ಒಪ್ಪಿಕೊಂಡಿದ್ದಾನೆ.

ಸದ್ಯ ಪೊಲೀಸರು ಮೆಡಿಕಲ್ ಟೆಸ್ಟ್ ಗಾಗಿ ಆರೋಪಿ ಆದಿತ್ಯರಾವ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here