ಇಂದಿನ ಸರ್ಜಿಕಲ್ ಸ್ಟ್ರೈಕ್ ಕುರಿತು ಮಮತಾ ಬ್ಯಾನರ್ಜಿ ಮತ್ತು ಕೇಜ್ರಿವಾಲ್ ಹೇಳಿದ್ದೇನು ಗೊತ್ತೇ?

0
515

ನ್ಯೂಸ್ ಕನ್ನಡ ವರದಿ: ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಪಾಕ್ ಆಕ್ರಮಿಕ ಕಾಶ್ಮೀರದ ಭಯೋತ್ಪಾದಕರ ನೆಲೆಗಳ ಮೇಲೆ ಭಾರತೀಯ ವಾಯು ಪಡೆ(ಐಎಎಫ್) ಯುದ್ಧ ವಿಮಾನಗಳು ನಡೆಸಿದ ವಾಯು ದಾಳಿಯನ್ನು ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಮತ್ತು ವಿರೋಧ ಪಕ್ಷಗಳ ನಾಯಕರು ಸ್ವಾಗತಿಸಿದ್ದು, ತುಂಬು ಹೃದಯದಿಂದ ಗುಣಗಾನ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರೂ ಕೂಡ ಐಎಎಫ್ ಕಾರ್ಯಾಚರಣೆಯನ್ನು ಶ್ಲಾಘಿಸಿದ್ಧಾರೆ. ಈ ಕುರಿತು ಟ್ವೀಟ್ ಮಾಡಿರುವ ದೀದಿ, ಐಎಎಫ್ ಎಂದರೆ ಇಂಡಿಯನ್ ಅಮೆಜಿಂಗ್ ಫೈಟರ್ಸ್, ಜೈಹಿಂದ್ ಎಂದು ಶ್ಲಾಘಿಸಿದ್ಧಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪುಲ್ವಾಮ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಒಳಗೆ ಭಯೋತ್ಪಾದಕರ ಅಡಗುದಾಣಗಳನ್ನು ಧ್ವಂಸಗೊಳಿಸಿರುವ ಭಾರತೀಯ ಸೇನೆಯ ಶೌರ್ಯವನ್ನು ಪ್ರಶಂಸಿಸಿದ್ದಾರೆ.

ರಾಜಕೀಯ ಪ್ರವೇಶಿಸಿರುವ ಖ್ಯಾತ ನಟ ಮತ್ತು ಮಕ್ಕಳ ನೀತಿ ಮೈಯಂ(ಎಂಎನ್‍ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್, ಪಾಕಿಸ್ತಾನ ನೆಲೆಯಲ್ಲಿ ಭಯೋತ್ಪಾದಕರ ಕ್ಯಾಂಪ್‍ಗಳ ಮೇಲೆ ನಡೆದ ಐಎಎಫ್ ವಾಯುದಾಳಿಯನ್ನು ಸ್ವಾಗತಿಸಿದ್ದಾರೆ. ಚೆನ್ನೈನಲ್ಲಿ ಇಂದು ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಭಾರತೀಯ ಸೇನೆಯ ಶೌರ್ಯವನ್ನು ಕೊಂಡಾಡಿದ್ದಾರೆ.

LEAVE A REPLY

Please enter your comment!
Please enter your name here