73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿಯಿಂದ ರಾಷ್ಟ್ರಪಿತರಿಗೆ ಗೌರವ ನಮನ

0
121

ನ್ಯೂಸ್ ಕನ್ನಡ ವರದಿ (15-8-2019): ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್ ಗೆ ತೆರಳಿ ಭಾರತದ ಪಿತಾಮಹ ಮಹಾತ್ಮಾ ಗಾಂಧಿಯವರ ಸ್ಮರಣಾರ್ಥ ಗೌರವ ನಮನ ಸಲ್ಲಿಸಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ದೆಹಲಿಯಲ್ಲಿ ಹಲವು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರಧಾನಿ ಮೋದಿ ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಭಾಷಣದಲ್ಲಿ ಹಲವಾರು ವಿಷಯಗಳ ಕುರಿತು ಉಲ್ಲೇಖ ಮಾಡಿದ್ದಾರೆ. ಕೆಂಪುಕೋಟೆಯಿಂದ ಭಾರತದ ಪ್ರಧಾನಿ ಸ್ವಾತಂತ್ರ್ಯೋತ್ಸವದಂದು ಬಾವುಟ ಹಾರಿಸುವುದು ಸಂಪ್ರದಾಯವಾಗಿ ಬಂದಿದೆ.

LEAVE A REPLY

Please enter your comment!
Please enter your name here