ಮುಲಾಯಂ ಸಿಂಗ್ ಆರೋಗ್ಯದಲ್ಲಿ ಏರುಪೇರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ!

0
178

ನ್ಯೂಸ್ ಕನ್ನಡ ವರದಿ : ಮುಲಾಯಂ ಸಿಂಗ್ ಯಾದವ್ ಹೈ ಶುಗರ್ ಮತ್ತು ಕಾರ್ಡಿಯೋ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಾಹಿತಿ ಪ್ರಕಾರ, ಮುಲಾಯಂ ಸಿಂಗ್ ಯಾದವ್ ಅವರ ಅರೋಗ್ಯ ತೀವ್ರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ವಿಮಾನದ ಮೂಲಕ ದೆಹಲಿಯ ಆಸ್ಪತ್ರೆಗೆ ಕರೆತರಲಾಗಿದೆ. ಭಾನುವಾರ ಸಂಜೆಯೇ ಮುಲಾಯಂ ಸಿಂಗ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಅವರು ಲಕ್ನೋನ ಡಾ. ರಾಮ್ ಮನೋಹರ್ ಲೋಹಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸೋಮವಾರ ಸಂಜೆ ತೀವ್ರವಾಗಿ ಕ್ಷೀನಿಸಿದ್ದು, ಅವರನ್ನು ಗುರುಗ್ರಾಂ ನಲ್ಲಿರುವ ಮೆದಾಂತ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಸೋಮವಾರ (ಜೂನ್ 10) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಮಾಜವಾದಿ ಪಕ್ಷದ ಪೋಷಕ ಮುಲಾಯಂ ಸಿಂಗ್ ಯಾದವ್ ಅವರ ನಿವಾಸದಲ್ಲಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

LEAVE A REPLY

Please enter your comment!
Please enter your name here