ಐಪಿಎಲ್ ಫೈನಲ್: ರೋಚಕ ಹಣಾಹಣಿಯಲ್ಲಿ ಜಯ ಸಾಧಿಸಿ ಚಾಂಪಿಯನ್ ಆದ ಮುಂಬೈ ಇಂಡಿಯನ್ಸ್!

0
207

ನ್ಯೂಸ್ ಕನ್ನಡ ವರದಿ(12.5.19): ಇಂಡಿಯನ್ ಪ್ರೀಮಿಯರ್ ಲೀಗ್ ನ ಬಲಿಷ್ಟ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಮಣಿಸಿದ ಮುಂಬೈ ಇಂಡಿಯನ್ಸ್ ಐಪಿಎಲ್-2019 ನ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 8 ವಿಕೆಟ್ ಗಳ ನಷ್ಟಕ್ಕೆ 149 ರನ್ ಪೇರಿಸಿತ್ತು. ಕೀರನ್ ಪೊಲಾರ್ಡ್ 41 ರನ್ ಹಾಗೂ ಡಿಕಾಕ್ 29 ರನ್ ಗಳಿಸಿದ್ದು ಬಿಟ್ಟರೆ ಬೇರೆ ಯಾವ ಬ್ಯಾಟ್ಸ್ ಮನ್ ಗಳೂ ಉತ್ತಮ ಪ್ರದರ್ಶನ ತೋರಿಲ್ಲ. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡ ಉತ್ತಮ ಆರಂಭ ಪಡೆಯಿತಾದರೂ ಬಳಿಕ ಕುಸಿತ ಕಂಡಿತು. ಶೇನ್ ವಾಟ್ಸನ್ 80 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ ಫಲಿಸಲಿಲ್ಲ. ಕೊನೆಯ ಓವರ್ ನ ಅಂತಿಮ ಎಸೆತದಲ್ಲಿ ವಿಕೆಟ್ ಪಡೆಯುವ ಮೂಲಕ ಮಾಲಿಂಗ ಮಿಂಚಿದರು. ಈ ಮೂಲಕ ರೋಚಕ ಒಂದು ರನ್ನುಗಳ ಜಯದೊಂದಿಗೆ ಮುಂಬೈ ತಂಡವು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿತು.

LEAVE A REPLY

Please enter your comment!
Please enter your name here