Thursday January 5 2017

Follow on us:

Contact Us
akshay-kumar-759
  2962

ಬೆಂಗಳೂರು ಘಟನೆಯ ಬಗ್ಗೆ ಅಕ್ಷಯ್ ಕುಮಾರ್ ಆಕ್ರೋಶ: ವೈರಲ್ ಆದ ವೀಡಿಯೋ

ನ್ಯೂಸ್ ಕನ್ನಡ(5-1-2017): ಹೊಸ ವರ್ಷಾಚರಣೆಯ ಸಂದರ್ಭ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ನೀಡಿರುವ ಪ್ರತಿಕ್ರಿಯೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದುಷ್ಕರ್ಮಿಗಳನ್ನು ಮೃಗಗಳು ಎಂದು ಬಣ್ಣಿಸಿರುವ ಅವರು, ನಿಜವಾಗಿಯೂ ಇದೊಂದು ಅವಮಾನಕರ ಘಟನೆ ಎಂದಿದ್ದಾರೆ.

“ಬೆಂಗಳೂರಿನಲ್ಲಿ ನಡೆದ ಘಟನೆಯು ನಾವು ಅನಾಗರಿಕ ಸಮಾಜದಲ್ಲಿದ್ದೇವೆಯೋ ಎನ್ನುವಂತೆ ಭಾಸವಾಗುತ್ತಿದೆ. ಮನುಷ್ಯರಿಂದ ಮೃಗಗಳಾಗಿ ಬದಲಾಗುತ್ತಿದ್ದೇವೆಯೂ ಎಂದೆನಿಸುತ್ತಿದೆ. ಇವರಿಗಿಂತ ಪ್ರಾಣಿಗಳೇ ವಾಸಿ” ಎಂದಿದ್ದಾರೆ. ಈ ವೀಡಿಯೋ ಈಗಾಗಲೇ ವೈರಲ್ ಆಗಿದ್ದು, 15 ಸಾವಿರ ಲೈಕ್ಸ್ ಹಾಗೂ 7 ಸಾವಿರ ಜನರು ರಿ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಘಟನೆಯ ಬಗ್ಗೆ ತಿಳಿದಾಗ ನನ್ನ ರಕ್ತ ಕುದಿಯುತ್ತಿತ್ತು. ತನ್ನ 4 ವರ್ಷ ಪ್ರಾಯದ ಪುತ್ರಿಯೊಂದಿಗೆ ಹೊಸ ವರ್ಷಾಚರಣೆಯ ನಂತರ ನಾನು ಹಿಂತಿರುಗುತ್ತಿದ್ದೆ. ಈ ಸಂದರ್ಭ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳ ಬಗ್ಗೆ ಮಾಹಿತಿ ಲಭಿಸಿತ್ತು. ನಿಮಗೆಲ್ಲರಿಗೂ ಇದರ ಬಗ್ಗೆ ಏನನ್ನಿಸಿತ್ತು ಎಂದು ಗೊತ್ತಿಲ್ಲ. ನನ್ನ ರಕ್ತವಂತೂ ಕುದಿಯುತ್ತಿತ್ತು. ಸಮಾಜವೊಂದು ಮಹಿಳೆಯನ್ನು ಗೌರವಿಸದಿದ್ದರೆ ಆ ಸಮಾಜವನ್ನು ಮಾನವೀಯ ಸಮಾಜ ಎನ್ನಲಾಗುವುದಿಲ್ಲ ಎಂದಿದ್ದಾರೆ”.

ತಾವು ಮಾಡಿರುವ ದುಷ್ಕøತ್ಯವನ್ನು ಸಮರ್ಥಿಸಿಕೊಳ್ಳಲು ಜನರು ಮಹಿಳೆಯರ ಬಟ್ಟೆಯ ಆಯ್ಕೆಯ ಬಗ್ಗೆ ದೂರುತ್ತಾರೆ ಎಂದಿರುವ ಅಕ್ಷಯ್ ಕುಮಾರ್ ಮಹಿಳೆಯರು ಧೈರ್ಯವಂತರಾಗಬೇಕು, ಎಚ್ಚರವಾಗಿರಬೇಕು ಹಾಗೂ ಆತ್ಮ ರಕ್ಷಣಾ ಕಲೆಗಳನ್ನು ಕಲಿತುಕೊಳ್ಳಬೇಕು ಎಂದು ನುಡಿದಿದ್ದಾರೆ.

nkibk

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅಂಗನವಾಡಿ ಕಾರ್ಯಕರ್ತೆಯ ಮೇಲೆ ಗ್ಯಾಂಗ್ ರೇಪ್: ಸಿಐಟಿಯು ಖಂಡನೆ

ಮುಂದಿನ ಸುದ್ದಿ »

ನೋಟು ಅಮಾನ್ಯದಿಂದ ದೇಶಕ್ಕೆ ಆರ್ಥಿಕ ಸಂಕಷ್ಟ : ಜೀವಿಜಯ

ಸಿನೆಮಾ

 • 3

  ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

  January 19, 2017

  – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

  Read More
 • Chennai-Express-First-Look-tbwm

  ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

  January 18, 2017

  ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

  Read More
 • ra-one

  “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

  January 18, 2017

  ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×