Tuesday February 13 2018

Follow on us:

Contact Us
    74

ಪ್ರಕೃತಿ ವಿಕೋಪ ಸಮಸ್ಯೆ ಪರಿಹಾರಕ್ಕೆ ಹನುಮಾನ್ ಚಾಲೀಸ ಪಠಿಸಿ: ಬಿಜೆಪಿ ನಾಯಕನಿಂದ ರೈತರಿಗೆ ಸಲಹೆ!

ನ್ಯೂಸ್ ಕನ್ನಡ ವರದಿ-(13.2.18): ಭೋಪಾಲ್: ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಆಲಿಕಲ್ಲು ಮಳೆಯಿಂದಾಗಿ ಓರ್ವ ರೈತ ಸಾವನ್ನಪ್ಪಿದ್ದು, ಮುಂದಿನ ಐದಾರು ದಿನಗಳ ಕಾಲ ಆಲಿಕಲ್ಲು ಸಹಿತ ಭಾರೀ ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಇದೀಗ ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ‘ ಹನುಮಾನ್ ಚಾಲೀಸ ಪಠಿಸುವುದರಿಂದ ಪ್ರಾಕೃತಿಕ ವಿಕೋಪದಿಂದಾಗಿ ಪಾರಾಗಬಹುದು, ಆದ್ದರಿಂದ ದಿನಂಪ್ರತಿ ಹನುಮಾನ್ ಚಾಲೀಸ ಪಠಿಸುವಂತೆ’ ರೈತರಿಗೆ ಕರೆ ನೀಡಿದ್ದಾರೆ.

ಮಧ್ಯ ಪ್ರದೇಶದ ಸಾಹೋರ್ ವಿಧಾನ ಸಭೆ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ನಾಯಕ ರಮೇಶ್ ಸಕ್ಸೇನಾ ರೈತರಿಗೆ ಈ ರೀತಿ ಕರೆ ನೀಡಿದ್ದು, ” ಹಿಂದೂಗಳ ಪವಿತ್ರ ಶ್ಲೋಕಗಳಲ್ಲಿ ಒಂದಾಗಿರುವ ಹನುಮಾನ್ ಚಾಲೀಸ ಪಠಿಸುವುದರಿಂದ ಪ್ರಾಕೃತಿಕ ವಿಕೋಪಗಳನ್ನು ತಡೆಯಬಹುದು, ಆದ್ದರಿಂದ ನೀವು ನಿಮ್ಮ ಮನೆಗಳಲ್ಲಿ ದಿನಕ್ಕೆ ಕನಿಷ್ಟ 1 ಗಂಟೆ ಹನುಮಾನ್ ಚಾಲೀಸಾವನ್ನು ಪಠಿಸಿ” ಎಂದು ರೈತರಿಗೆ ಮನವಿ ಮಾಡಿಕೊಂಡಿದ್ದಾರೆ.

ನಾನು ಯುವಜನರಲ್ಲಿ ಮನವಿ ಮಾಡುತ್ತೇನೆ ನೀವು ನಿಮ್ಮ ಮನೆಗಳಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ಪ್ರಾಕೃತಿಕ ವಿಕೋಪವನ್ನು ತಡೆಯಬಹುದು ಎಂದು ದೃಢವಾಗಿ ಹೇಳಬಲ್ಲೆ, ಹಾಗಾಗಿ ಐದು ದಿನಗಳ ಕಾಲ ನೀವು ಭಕ್ತಿಯಿಂದ ಪಠಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ ಎಂದು ಸಕ್ಸೇನಾ ಹೇಳಿರುವ ಬಗ್ಗೆ ಅಲ್ಲಿನ ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕರ್ನಾಟಕಕ್ಕೆ ರಾಫೇಲ್ ಕಂಪನಿ ಬರಬೇಕಿತ್ತು, ಪ್ರಧಾನಿ ರಾಜ್ಯದ ಉದ್ಯೋಗ ಕಿತ್ತುಕೊಂಡಿದ್ದಾರೆ: ರಾಹುಲ್

ಮುಂದಿನ ಸುದ್ದಿ »

ಭಾರತ ತಂಡದ ಅಭಿಮಾನಿ ನನ್ನ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದಾರೆ: ಇಮ್ರಾನ್ ತಾಹಿರ್

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×