Monday October 9 2017

Follow on us:

Contact Us
    462

ದೋಣಿ ದುರಂತ: 12 ಮಂದಿ ರೋಹಿಂಗ್ಯಾ ಮುಸ್ಲಿಮರು ನೀರುಪಾಲು

ನ್ಯೂಸ್ ಕನ್ನಡ ವರದಿ-(09.10.17): ಮಯನ್ಮಾರ್ ಸೇನಾ ಕಾರ್ಯಚರಣೆಯಿಂದ ಹಲವಾರು ರೋಹಿಂಗ್ಯಾ ಮುಸ್ಲಿಮರು ಮೃತಪಟ್ಟು ಇನ್ನು ಹಲವು ಮಂದಿ ತಮ್ಮ ರಕ್ಷಣೆಗಾಗಿ ನೆರೆಯ ಬಾಂಗ್ಲಾದೇಶ ಮತ್ತು ಭಾರತಕ್ಕೆ ವಲಸೆ ಹೋಗುತ್ತಿದ್ದಾರೆ. ಇದೀಗ ಬಾಂಗ್ಲಾದೇಶಕ್ಕೆ ವಲಸೆ ಹೋಗುತ್ತಿದ್ದ ಸಂದರ್ಭ ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತು ಸಾಗಿಸುತ್ತಿದ್ದ ಬೋಟ್ ಬಾಂಗ್ಲಾದೇಶದ ನಾಫ್ ನದಿಯಲ್ಲಿ ಮುಳುಗಡೆಯಾಗಿ ಕನಿಷ್ಟ 12 ಮಂದಿ ಮೃತಪಟ್ಟಿದ್ದಾರೆ.

ಸುಮಾರು 100 ಮಂದಿ ರೊಹಿಂಗ್ಯಾ ನಿರಾಶ್ರಿತರು ಮಯನ್ಮಾರ್ ತೊರೆದು ಬಾಂಗ್ಲಾದೇಶದತ್ತ ಪ್ರಯಾಣ ಬೆಳೆಸಿದ್ದರು. ಪ್ರಯಾಣಿಕ ಬೋಟ್ ನಲ್ಲಿ ನಿರಾಶ್ರಿತರು ಬಾಂಗ್ಲಾದೇಶದತ್ತ ಸಾಗಿದ್ದು, ಈ ವೇಳೆ ಬೋಟ್ ದುರಂತಕ್ಕೀಡಾಗಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಬಾಂಗ್ಲಾದೇಶದ ಅಗ್ನಿಶಾಮಕ ದಳ ಹಾಗೂ ವಿಪತ್ತು ನಿಗ್ರಹ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಬೋಟ್ ಪ್ರಯಾಣಿಕರೆಲ್ಲರೂ ನೀರಿನಲ್ಲಿ ಮುಳುಗಿದ್ದು, ಈ ವರೆಗೂ ಸುಮಾರು 12 ಶವಗಳನ್ನು ಹೊರತೆಗೆಯಲಾಗಿದೆ. ಅಂತೆಯೇ ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಜೆಡಿಎಸ್ ನಲ್ಲಿ ಮುಸ್ಲಿಮರಿಗೆ ಚಿತ್ರಹಿಂಸೆ ಕೊಡುತ್ತಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ »

ರಟ್ಟಿನ ಬಾಕ್ಸ್ ನಲ್ಲಿ ಹುತಾತ್ಮ ಯೋಧರ ಮೃತದೇಹ: ತೀವ್ರ ಆಕ್ರೋಶ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×