Monday January 9 2017

Follow on us:

Contact Us
    330

ಮಹಿಳಾ ಕಾಂಗ್ರೆಸ್‍ ನಿಂದ ತಮಟೆ ಪ್ರತಿಭಟನೆ: ಕೇಂದ್ರ ಸರಕಾರದ ವಿರುದ್ಧ ಬೀದಿಗಳಿದ ಮಹಿಳಾ ಬಣ

ನ್ಯೂಸ್ ಕನ್ನಡ ವರದಿ (9-1-17): ಮಡಿಕೇರಿ : ನೋಟುಗಳನ್ನು ಅಮಾನ್ಯೀಕರಣ ಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದಿಂದ ನಗರದಲ್ಲಿ ‘ತಮಟೆ’ ಪ್ರತಿಭಟನೆ ನಡೆಯಿತು.

ನಗರದ ತಿಮ್ಮಯ್ಯ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಹಿಳಾ ಕಾಂಗ್ರೆಸ್ಸಿಗರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದಿಢೀರ್ ನಿರ್ಧಾರದಿಂದಾಗಿ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದು ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮ ಬೀರಿದೆಯೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಎಐಸಿಸಿ ಸಂಯೋಜಕಿ ಉಷಾ ನಾಯ್ಡು ಮಾತನಾಡಿ, ದೇಶದ ಜನರನ್ನು ಲೂಟಿ ಮಾಡುವುದಕ್ಕಾಗಿಯೇ ಕೇಂದ್ರದ ಬಿಜೆಪಿ ಸರ್ಕಾರ ಆರ್ಥಿಕ ಕ್ಷೇತ್ರದಲ್ಲಿ ಗೊಂದಲ ಸೃಷ್ಟಸಿದೆ ಎಂದು ಆರೋಪಿಸಿದರು. ಪರಿಸ್ಥಿತಿಯನ್ನು ಸರಿಪಡಿಸಲು 50 ದಿನಗಳ ಗಡುವು ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಪ್ರಯತ್ನದಲ್ಲಿ ವಿಫಲರಾಗಿದ್ದಾರೆ. ಇಷ್ಟು ದಿನ ಕಾದರು ಪರಿಸ್ಥತಿ ಬದಲಾಗದ ಕಾರಣ ಜನರು ಬೇಸತ್ತಿದ್ದು, ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

11a

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಕುಮುದಾ ಧರ್ಮಪ್ಪ ಮಾತನಾಡಿ, ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು. ಬ್ಯಾಂಕ್‍ ನಿಂದ ಹಣವನ್ನು ಪಡೆಯಲು ವಿಧಿಸಲಾಗಿರುವ ಎಲ್ಲಾ ನಿರ್ಬಂಧಗಳನ್ನು ತಕ್ಷಣ ತೆಗೆದುಹಾಕಬೇಕು, ಠೇವಣಿ ಇಟ್ಟಿರುವ ಎಲ್ಲಾ ಠೇವಣಿದಾರರುಗಳಿಗೆ ನಿರ್ಬಂಧ ಹೇರಿದ ದಿನದಿಂದ ಶೇ.18 ರಷ್ಟು ವಿಶೇಷ ಬಡ್ಡಿಯನ್ನು ನೀಡಬೇಕು. ಡಿಜಿಟಲ್ ವ್ಯವಹಾರಗಳ ಮೇಲೆ ವಿಧಿಸಲಾಗಿರುವ ಎಲ್ಲಾ ರೀತಿಯ ಶುಲ್ಕಗಳನ್ನು ರದ್ದು ಪಡಿಸಬೇಕು. ಆಹಾರ ಭದ್ರತಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪಿಡಿಎಸ್ ವ್ಯವಸ್ಥೆಯ ಪ್ರಕಾರ ವಿತರಿಸಲಾದ ಪಡಿತರ ದರವನ್ನು ಅರ್ಧದಷ್ಟು ಕಡಿತಗೊಳಿಸಬೇಕು. ವಿಶೇಷ ಏಕ ಕಾಲಿಕ ಬೋನಸನ್ನು ಹಿಂಗಾರು ಬೆಳೆಗಳ ಮೇಲೆ ಶೇ.20 ರಷ್ಟು ಬೋನಸ್ ನೀಡಬೇಕು ಎಂದು ಒತ್ತಾಯಿಸಿದರು.

ನೋಟುಗಳ ಅಮಾನ್ಯೀಕರಣದಿಂದ ಸಂಕಷ್ಟ ಎದುರಿಸಿದ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಮಹಿಳೆಯ ಖಾತೆಗೆ ತಲಾ 20 ಸಾವಿರ ರೂ. ಪರಿಹಾರ ಠೇವಣಿ ನೀಡಬೇಕು. ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ದಿನಗಳು ಮತ್ತು ವೇತನದ ದರವನ್ನು ದುಪ್ಪಟ್ಟು ಗೊಳಿಸಬೇಕು. ನ.8 ರಿಂದ ಯಾರೆಲ್ಲ ಕೆಲಸಗಳನ್ನು ಕಳೆದುಕೊಂಡಿದ್ದಾರೋ ಅವರನ್ನು ಗುರುತಿಸಲು ಮತ್ತು ನೋಂದಾಯಿಸಲು ಕೇಂದ್ರ ಸರ್ಕಾರ ವಿಶೇಷ ಆಂದೋಲನವನ್ನು ಆಯೋಜಿಸಬೇಕು ಮತ್ತು ಮಾ.31 ರ ವರೆಗೆ ಅನ್ವಯವಾಗುವಂತೆ ಕನಿಷ್ಠ ವೇತನ ದರದಲ್ಲಿ ಪರಿಹಾರ ನೀಡಬೇಕು. ಸಣ್ಣವ್ಯಾಪಾರಿಗಳಿಗೆ ಶೇ.50 ರಷ್ಟು ಆದಾಯ ತೆರಿಗೆ ಮತ್ತು ಮಾರಾಟ ತೆರಿಗೆ ವಿನಾಯ್ತಿ ನೀಡಬೇಕು. ಈ ರೀತಿಯ ವಿನಾಯ್ತಿಯಿಂದ ರಾಜ್ಯ ಸರ್ಕಾರಗಳಿಗೆ ಉಂಟಾದ ಆದಾಯದ ನಷ್ಟವನ್ನು ಕೇಂದ್ರ ಸರ್ಕಾರವೆ ಭರಿಸಬೇಕೆಂದು ಕುಮುದಾ ಧರ್ಮಪ್ಪ ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಈಗಾಗಲೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ವಿರೋಧ ಪಕ್ಷವಾದ ಕಾಂಗ್ರೆಸ್ ಕೇಳಿದ್ದು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದಕ್ಕೆ ಪ್ರಧಾನಿಗಳು ಉತ್ತರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹಿಳಾ ಕಾಂಗ್ರೆಸ್ ಪ್ರಮುಖರು, ತಮ್ಮ ಕೊರಳಿಗೆ ಬೆಂಡೆ, ತೊಂಡೆ, ಮೆಣಸಿನ ಹಾರವನ್ನು ಹಾಕಿಕೊಂಡು, ತಮಟೆಗಳನ್ನು ಬಡಿದು, ಘೋಷಣೆಗಳನ್ನು ಕೂಗಿದ್ದು ವಿಶೇಷವಾಗಿತ್ತು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆ ಪುಷ್ಪಲತಾ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಚಿವೆ ಸುಮಾವಸಂತ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಟಿ. ಪ್ರದೀಪ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಕೆ.ಎಂ. ಲೋಕೇಶ್, ನಾಪಂಡ ಮುತ್ತಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಎಂ. ಗಣೇಶ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಯಂತಿ ಶೆಟ್ಟಿ, ಸುರಯ್ಯಾ ಅಬ್ರಾರ್, ತಾಹಿರಾ ಹಫೀಜ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

nkicmhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

ಮುಂದಿನ ಸುದ್ದಿ »

270 ಕೋಟಿ ರೂ. ಮೊತ್ತದ ಡ್ರಗ್ಸ್ ವ್ಯವಹಾರ: ಮಾಜಿ ಶಾಸಕನ ಪುತ್ರನ ಬಂಧನ

ಸಿನೆಮಾ

  • ಸರಳವಾಗಿ ರಿಜಿಸ್ಟರ್ ಮದುವೆಯಾದ ಮುಸ್ತಫಾ-ಪ್ರಿಯಾಮಣಿ

    August 23, 2017

    ಬೆಂಗಳೂರು: ತಮಿಳು, ತೆಲುಗು, ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳ ಸಿನಿಮಾದಲ್ಲಿ ನಟಿಸಿದ್ದ ಬಹುಭಾಷಾ ತಾರೆ ಪ್ರಿಯಾಮಣಿ ಇಂದು ತಮ್ಮ ಹಲವು ಕಾಲದ ಗೆಳೆಯ ಮುಸ್ತಫಾರಾಜಾರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜಯನಗರ ರಿಜಿಸ್ಟರ್ ಆಫೀಸಿಗೆ ನಟಿ ...

    Read More
  • ಈ ಬಾರಿ ಗಣೇಶೋತ್ಸವ ಆಚರಿಸದ ಸಲ್ಮಾನ್ ಖಾನ್: ಕಾರಣವೇನು ಗೊತ್ತೇ?

    August 22, 2017

    ನ್ಯೂಸ್ ಕನ್ನಡ-(22.08.17): ಬಾಲಿವುಡ್ ನಟ ಸಲ್ಮಾನ್ ಖಾನ್ ಗಣಪತಿ ಭಕ್ತನಾಗಿದ್ದು, ಪ್ರತೀವರ್ಷವೂ ತಮ್ಮ ಮನೆಯಲ್ಲಿ ಗಣೇಶೋತ್ಸವವನ್ನು ಆಚರಿಸುತ್ತಾರೆ. ಆದರೆ ಈ ಬಾರಿ ಸತತ 15ವರ್ಷಗಳಿಂದ ತಮ್ಮ ಮನೆಯಲ್ಲಿ ನಡೆಸುತ್ತಾ ಬಂದಿದ್ದ ವೈಭವದ ಗಣೇಶೋತ್ಸವವನ್ನು ಕೈಬಿಟ್ಟು ಸಲ್ಮಾನ್ ಖಾನ್ ...

    Read More
  • ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆಗೈದ ತಮಿಳು ನಟ ಆರ್ಯ

    August 21, 2017

    ನ್ಯೂಸ್ ಕನ್ನಡ ವರದಿ-(21.08.17): ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ಖ್ಯಾತ ಯುವನಟ ಆರ್ಯ ಮಮ್ಮೂಟಿ ಅಭಿನಯದ ಗಾಡ್ ಫಾದರ್ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ, ಕೇರಳದಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಸೃಷ್ಟಿಸಿಕೊಂಡಿದ್ದರು. ಇದೀಗ ಸೂಪರ್ ಹಿಟ್ ಚಿತ್ರವಾದ ...

    Read More
  • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

    August 16, 2017

    ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×