Wednesday August 17 2016

Follow on us:

Contact Us
    35951

ಪಾಕ್‌ನಲ್ಲಿ ಮದುವೆ ಊಟ ಮಾಡಿ ಬರುವ ಮೋದಿ ದೇಶದ್ರೋಹಿಯಲ್ಲವೇ-ದಿನೇಶ್ ಗುಂಡೂರಾವ್

ನ್ಯೂಸ್ ಕನ್ನಡ ವರದಿ-ಕಾಶ್ಮೀರದಲ್ಲಿ ಪಾಕ್ ಧ್ವಜ ಹಾರಾಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಹೋಗಿ ಮದುವೆ ಊಟ ಮಾಡಿಕೊಂಡು ಬರುತ್ತಾರೆ ಇದಕ್ಕೆ ದೇಶದ್ರೋಹವೆನ್ನದೆ ಇನ್ನೇನನ್ನಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹ ಮಾಡುತ್ತಿರುವವರು ಬಿಜೆಪಿಯವರು. ಕಾಂಗ್ರೆಸ್‌ನಿಂದ ದೇಶದ್ರೋಹವಾಗುತ್ತಿದೆ ಎಂದು ವಿನಾಕಾರಣ ಆರೋಪ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಮಾದ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿಪಿಪಿ ಕಾರ್ಯಕರ್ತರು ನಿಷೇಧಿತ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರಿಂದ ಅವರ ಮೇಲೆ ಲಾಠಿ ಚಾರ್ಚ್ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥನೆ ನೀಡಿದ್ದಾರೆ.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಳ್ಳಭಟ್ಟಿ ಸಾರಾಯಿ ಕುಡಿದು 12 ಮಂದಿ ಸಾವು: ಅನಾರೋಗ್ಯದಿಂದ ಸತ್ತರು ಎಂದ ಪೊಲೀಸರು!

ಮುಂದಿನ ಸುದ್ದಿ »

ದಿಲ್ಲಿ: ಕತ್ತು ಸೀಳಿದ “ಚೈನೀಸ್ ಮಾನ್ಜಾ”; ಇಬ್ಬರು ಪುಟಾಣಿಗಳ ಸಹಿತ ಮೂವರು ಬಲಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×