Wednesday October 18 2017

Follow on us:

Contact Us
    268

ಶ್ವೇತಭವನದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಿದ ಡೊನಾಲ್ಡ್ ಟ್ರಂಪ್

ನ್ಯೂಸ್ ಕನ್ನಡ ವರದಿ-(18.10.17): ಅಮೆರಿಕ ಅಧ್ಯಕ್ಷರಾಗಿದ್ದ ಜಾರ್ಜ್ ಬುಶ್ ಶ್ವೇತಭವನದಲ್ಲಿ ದೀಪಾವಳಿ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಿದ್ದು, ಬಳಿಕ ಬರಾಕ್ ಒಬಾಮಾ ಕೂಡಾ ದೀಪಾವಳಿ ಹಬ್ಬವನ್ನು ಆಚರಿಸಿದ್ದರು. ಇದೀಗ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಪುತ್ರಿಯೊಂದಿಗೆ ಹಾಗೂ ಸಿಬ್ಬಂದಿಗಳೊಂದಿಗೆ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ನೆರೆದ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್‌, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಉದ್ಯಮ ಮತ್ತು ಶಿಕ್ಷಣವೇ ಮುಂತಾಗಿ ಹಲವಾರು ಕ್ಷೇತ್ರಗಳಲ್ಲಿ ಅಸಾಮಾನ್ಯ ಕೊಡುಗೆ ನೀಡುತ್ತಿರುವ ಮತ್ತು ಅಮೆರಿಕದ ಅಭಿವೃದ್ಧಿಯಲ್ಲಿ ತಮ್ಮ ಯೋಗದಾನ ಸಲ್ಲಿಸುತ್ತಿರುವ ಭಾರತೀಯ ಅಮೆರಿಕನ್ನರ ಅತ್ಯಮೂಲ್ಯ ಕೊಡುಗೆಯನ್ನು ಬಹುವಾಗಿ ಪ್ರಶಂಸಿಸಿದರು.

ಶ್ವೇತ ಭವನದಲ್ಲಿ ನಡೆದ ಈ ದೀಪಾವಳಿ ಹಬ್ಬದಾಚರಣೆಯ ಸಂದರ್ಭದಲ್ಲಿ ಟ್ರಂಪ್‌ಗೆ ಅವರ ಆಡಳಿತೆಯಲ್ಲಿರುವ ಹಿರಿಯ ಭಾರತೀಯ ಅಮೆರಿಕನ್‌ ಸದಸ್ಯೆ ಹಾಗೂ ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿಯಾಗಿರುವ ನಿಕ್ಕಿ ಹ್ಯಾಲಿ, ಅಮೆರಿಕದ ಮೇಡಿಕೇರ್‌ ಮತ್ತು ಮೆಡಿಕೇಡ್‌ ಸೇವಾ ಕೇಂದ್ರದ ಮುಖ್ಯಸ್ಥೆಯಾಗಿರುವ ಸೀಮಾ ವರ್ಮಾ ಮುಂತಾಗಿ ಹಲವರು ಜತೆ ನೀಡಿ, ದೀಪಾವಳಿ ಸಂಭ್ರಮವನ್ನು ಹಂಚಿಕೊಂಡರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕೇವಲ ಐದು ತಿಂಗಳಲ್ಲಿ ಮಾರುತಿ ಡಿಸೈರ್ ಕಾರು ಮಾರಾಟವಾದದ್ದು ಎಷ್ಟು ಗೊತ್ತೇ?

ಮುಂದಿನ ಸುದ್ದಿ »

ನೋಟ್ ಬ್ಯಾನ್ ಬೆಂಬಲಿಸಿದ್ದಕ್ಕೆ ಸಾರ್ವಜನಿಕ ಕ್ಷಮೆ ಕೋರಿದ ಕಮಲ್ ಹಾಸನ್!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×