Thursday October 19 2017

Follow on us:

Contact Us

ಕಾರವಾರ: ಎನ್.ಎಸ್.ಎಸ್. ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಕಾರವಾರ: ಬಾಪೂಜಿ ಗ್ರಾಮೀಣ ವಿಕಾಸ ಸಮಿತಿಯ ಶ್ರೀ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ಸಮಾರೋಪ ಸಮಾರಂಭ ಜರುಗಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ. ಎಸ್ . ನಾಯ್ಕ ಆಗಮಿಸಿ ಇಂತಹ ಶಿಬಿರಗಳು ವಿದ್ಯಾರ್ಥಿ ಜೀವನದಲ್ಲಿ ಅತ್ಯವಶ್ಯಕವಾಗಿವೆ. ವಿದ್ಯಾರ್ಥಿಗಳು ಪಠ್ಯದ ಜೋತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಇದರಿಂದ ಆಲೋಚನಾಶಕ್ತಿ, ಕ್ರೀಯಾಶಕ್ತಿ, ಸಂಘಟನಾ ಶಕ್ತಿ ಬೆಳೆಯುವುದು ಶಿಬಿರದಲ್ಲಿ ಪಡೆದ ಜ್ಞಾನವನ್ನು, ತರಬೇತಿಯನ್ನು ಜೀವನದುದ್ದಕ್ಕೂ ಪಾಲಿಸಿ ಎಂದು ಹೇಳಿದರು. ಅದರಂತೆ ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಸುರೇಶ ಭಜಂತ್ರಿ ಅವರು ಪಾಲ್ಗೊಂಡು ವಿಧ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಿ ಹಾಗೂ ಬೆಳೆಸಿಕೊಳ್ಳಿ ಪ್ರತಿಯೊಬ್ಬರ ಸೇವೆ ಸಮಾಜಕ್ಕೆ & ದೇಶಕ್ಕೆ ಅತ್ಯಂತ ಅವಶ್ಯಕವಾದುದು ಹಾಗೇಯೇ ಸ್ವಚ್ಛತೆಯ ಬಗ್ಗೆ ಹಾಗೂ ಆರೋಗ್ಯ ಸೂತ್ರಗಳ ಬಗ್ಗೆ ಹೇಳಿದರು, ಹಿರಿಯರನ್ನು ಗೌರವಿಸಿ ಹಾಗೂ ಪರಿಸರ ರಕ್ಷಣೆ ಮಾಡಿ ಎಂದರು. ಬಾಪೂಜಿ ಗ್ರಾಮೀಣ ವಿಕಾಸ ಸಮಿತಿಯ ಸದ್ಯಸರಾದ  ಶ್ರೀ ಪಾಂಡುರಂಗ. ಎಸ್ ನಾಯ್ಕ ಪಾಲ್ಗೊಂಡು ಓ.S.S ಕುರಿತು ಹಾಗೂ ಬಿ.ಜಿ.ವಿ.ಎಸ್ ಶಿಕ್ಷಣ ಸಂಸ್ಥೆಯ ಉದ್ದೇಶ ಕುರಿತು ಹಾಗೂ ರಾಜಕೀಯ ಕ್ಷೇತ್ರದ ಬಗ್ಗೆ ವಿವರಿಸಿ ಒಳ್ಳೆಯ ನಾಯಕರಾಗಿ ಒಳ್ಳೆಯ ನಾಯಕರನ್ನು ಆರಿಸಿ ಎಂದರು. ತಾಲೂಕಾ ಪಂಚಾಯತ ಸದ್ಯಸರಾದ ಶ್ರೀಮತಿ ಸರೋಜನಿ. ಗೌಡ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ಕಿರಣ ಅಸ್ನೋಟಿಕರ ವಹಿಸಿದ್ದರು.

ಪ್ರಾಚಾರ್ಯರಾದ ಶ್ರೀ ಪ್ರಕಾಶ ಕೆ ರಾಣೆಯವರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ದಯಾನಂದ ಗೌಡ ಹಾಗೂ ಸಂಗಡಿಗರು ಭಾವೈಕ್ಯತೆ ಗೀತೆ ಹಾಡಿದರು, ಶಿಬಿರಾರ್ಥಿಗಳಾದ ಶ್ವೇತಾ, ದಯಾನಂದ, ನಾಗರಾಜ, ಅಕ್ಷಯ, ಅಭಿನವ, ರೂಪೇಶ, ಅಕ್ಷತಾ, ಸುಪ್ರೀಯಾ ಶಿಬಿರದ ಅನಿಸಿಕೆಗಳನ್ನು ಹಂಚಿಕೊಂಡರು. ಚಂದ್ರಿಕಾ ಹಾಗೂ ಸಂಗಡಿಗರು ವಿದಾಯ ಗೀತೆ ಹಾಡಿದರು. ಓ.S.S ಕಾರ್ಯಕ್ರಮಾಧಿಕಾರಿ ಶ್ರೀ ಬಸವರಾಜ ನಡಗೇರಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಬಸಮ್ಮ, ಪೋಲಿಸಪಾಟೀಲ್ ವಂದಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹೊನ್ನಾವರ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

ಮುಂದಿನ ಸುದ್ದಿ »

ಕಾರವಾರ: ಶಾಸನವಾಡ ಕಾಳಿ ನದಿಗೆ ತಡೆಗೋಡೆ ನಿರ್ಮಿಸುವಂತೆ ಮನವಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×