NRC ಜಾರಿ ನಿರ್ಧಾರವನ್ನು ಕೈ ಬಿಟ್ಟ ರಾಜ್ಯ ಸರ್ಕಾರ: ಗೃಹ ಮಂತ್ರಿ ಹೇಳಿದ್ದೇನು ಗೊತ್ತೆ..?

0
275

ನ್ಯೂಸ್ ಕನ್ನಡ ವರದಿ: ಅಸ್ಸಾಂನಂತೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿಯ ನಿರ್ಧಾರವನ್ನು ಕರ್ನಾಟಕ ಸರಕಾರ ಕೈಬಿಟ್ಟಿದ್ದು, ದಾಖಲೆಗಳಿಲ್ಲದ ವಲಸಿಗರನ್ನು ಮತ್ತು ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿರುವ ವಿದೇಶಿ ಪ್ರಜೆಗಳನ್ನು ಗುರುತಿಸುವ ಡೇಟಾಬೇಸ್ ನಡೆಸಲು ಮುಂದಾಗಿದೆ ಎಂದು ವರದಿಯಾಗಿದೆ.

ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ಸೂಚಿಸುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲೂ ಜಾರಿಗೆ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು.

NRC ಜಾರಿ ಘೋಷಿಸಿದ ಮರುದಿನ ಈ ನಿರ್ಧಾರವನ್ನು ಸರಕಾರ ಕೈಬಿಟ್ಟಿದೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ದಾಖಲೆಗಳ ತಯಾರಿ ಮತ್ತು ನಿರ್ವಹಣೆಗಳಲ್ಲಿರುವ ಪ್ರಾಯೋಗಿಕ ಸಮಸ್ಯೆಗಳಿಂದ ಈ ನಿರ್ಧಾರವನ್ನು ಸದ್ಯಕ್ಕೆ ಕೈಬಿಡಲಾಗಿದೆ. “ನಾವು ಅಸ್ಸಾಂ ಎನ್ ಆರ್ ಸಿಯಂತೆ ರಾಜ್ಯದಲ್ಲಿ ಎನ್‌ಆರ್‌ಸಿಯನ್ನು ಜಾರಿಗೊಳಿಸುವುದಿಲ್ಲ. ಅಕ್ರಮ ಮತ್ತು ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿರುವವರ ಮಾಹಿತಿ ಕಲೆಹಾಕುತ್ತೇವೆ” ಎಂದು ಬಸವರಾಜ ಬೊಮ್ಮಾಯಿ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

LEAVE A REPLY

Please enter your comment!
Please enter your name here