ಡಾ.ಜಿ. ಪರಮೇಶ್ವರ್ ಪಿಎ ರಮೇಶ್ ಆತ್ಮಹತ್ಯೆ!

0
585

ನ್ಯೂಸ್ ಕನ್ನಡ ವರದಿ: ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಮನೆ ಹಾಗೂ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆ ಕಾಲೇಜುಗಳ ಮೇಲೆ ಐಟಿ ದಾಳಿ ಬೆನ್ನಲ್ಲೇ ಪರಮೇಶ್ವರ್ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಐಟಿ ದಾಳಿಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಪಿಎ ರಮೇಶ್ ಅವರು ಬಳಿಕ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಯುನಿವರ್ಸಿಟಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಮೇಶ್ ಅವರು ಕಳೆದ 9 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಮೇಶ್ ಮೂಲತಃ ರಾಮನಗರ ತಾಲೂಕಿನ ಮೇಳೆ ಹಳ್ಳಿ ನಿವಾಸಿಯಾಗಿದ್ದರು. ಘಟನಾ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here