ಇಮ್ರಾನ್ ನೀವು ಪ್ರಾಮಾಣಿಕರಾಗಿದ್ದರೆ ಉಗ್ರ ಮಸೂದ್ ನನ್ನು ನಮಗೆ ಒಪ್ಪಿಸಲಿ!: ಸುಷ್ಮಾ ಸ್ವರಾಜ್

0
227

ನ್ಯೂಸ್ ಕನ್ನಡ ವರದಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಉತ್ತಮ ಆಡಳಿತಗಾರ, ಪ್ರಾಮಾಣಿಕ ಮತ್ತು ಉದಾರ ಮನಸ್ಸಿನ ವ್ಯಕ್ತಿಯಾಗಿದ್ದರೆ ಜೈಶ್-ಎ -ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್‍ನನ್ನು ಭಾರತಕ್ಕೆ ಹಸ್ತಾಂತರಿಸಲಿ. ಆಗ ಅವರ ಪ್ರಾಮಾಣಿಕತೆಯನ್ನು ಒಪ್ಪುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಸವಾಲ್ ಹಾಕಿದ್ದಾರೆ.

ತನ್ನ ನೆಲದಲ್ಲಿರುವ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಭಯೋತ್ಪಾದನೆ ಮುಕ್ತ ವಾತಾವರಣದಲ್ಲಿ ನಾವು ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ, ಹಿಂಸಾಚಾರ ಮತ್ತು ಶಾಂತಿ ಮಾತುಕತೆ ಒಟ್ಟೊಟ್ಟಿಗೆ ಸಾಗುವುದಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here