ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್‌ ಏರ್ಲೈನ್ಸ್‌ ವಿಮಾನ ಪತನ

0
96

ನ್ಯೂಸ್ ಕನ್ನಡ ವರದಿ: ಲಾಹೋರ್‌ ನಿಂದ ಕರಾಚಿಗೆ ತೆರಳುತ್ತಿದ್ದ ಪಾಕಿಸ್ತಾನ್‌ ಏರ್ಲೈನ್ಸ್‌ ಗೆ ಸೇರಿದ ವಿಮಾನ ಪತನಗೊಂಡಿದೆ.

ಕರಾಚಿ ವಿಮಾನ ನಿಲ್ದಾಣದ ಬಳಿ ವಿಮಾನ ಪತನಗೊಂಡಿದ್ದು, 90 ಕ್ಕೂ ಅಧಿಕ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ.

ಜನ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿರುವ ಕಾರಣ ಹೆಚ್ಚಿನ ಸಾವು-ನೋವು ಸಂಭವಿಸಿರಬಹುದೆಂದು ಹೇಳಲಾಗುತ್ತಿದ್ದು, ಲಾಹೋರ್‌ ನಿಂದ ಹೊರಟಿದ್ದ ಈ ವಿಮಾನ ಕರಾಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ಸ್ವಲ್ಪ ಮುನ್ನ ಪತನಗೊಂಡಿದೆ ಎಂದು ರೇಡಿಯೋ ಪಾಕಿಸ್ತಾನ್‌ ವರದಿ ಮಾಡಿದೆ.

ವಿಮಾನದಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ ಎನ್ನಲಾಗಿದ್ದು, ನೂರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸಿವೆ.

LEAVE A REPLY

Please enter your comment!
Please enter your name here