Friday January 12 2018

Follow on us:

Contact Us
    153

ಸಿದ್ದರಾಮಯ್ಯರಿಗೆ ಕಾಮಾಲೆ ರೋಗ: ಡಿ.ವಿ ಸದಾನಂದಗೌಡ ಲೇವಡಿ

ನ್ಯೂಸ್ ಕನ್ನಡ(12-01-2018): ಚಿಕ್ಕಬಳ್ಳಾಪುರ : ಸಿಎಂ ಸಿದ್ದರಾಮಯ್ಯ ಅವರಿಗೆ ಕಾಮಾಲೆ ರೋಗ ಬಂದಿರುವುದರಿಂದ ಕಾಣುವುದೆಲ್ಲಾ ಹಳದಿಯಾಗಿ ಕಾಣುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಟೀಕಿಸಿದ್ದಾರೆ.

ಗೌರಿಬಿದನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲುವ ಭೀತಿಯಿಂದ ಸಂಯಮ ಕಳೆದುಕೊಂಡಿರುವ ಸಿದ್ದರಾಮಯ್ಯ, ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸಭ್ಯ ರಾಜಕಾರಣಕ್ಕೆ ಶೋಭೆ ತರುವುದಿಲ್ಲ ಎಂದರು.

ಮನೆಗೆ ಬೆಂಕಿ ಬಿದ್ದರೆ ಬೀಡಿ ಅಂಟಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಂಡಿರುವ ಸಿದ್ದರಾಮಯ್ಯ, ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರದ ಕಾಂಗ್ರೆಸ್ಸಿಗರನ್ನು ಎತ್ತಿಕಟ್ಟಿ ಏನೂ ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಇದು ರಾಜ್ಯದ ರೈತರಿಗೆ ಅವರು ಮಾಡಿರುವ ಅನ್ಯಾಯ ಎಂದು ಕಿಡಿಕಾರಿದರು. ಮುಖ್ಯಮಂತ್ರಿ ಏನೇ ಮಾತನಾಡಿದರೂ ದಾಖಲೆಯಾಗುತ್ತದೆ. ಹಾಗಾಗಿ, ಅವರು ಮರ್ಯಾದೆ ಉಳಿಸಿಕೊಳ್ಳಲಿ ಎಂದು ಸದಾನಂದಗೌಡ ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಹೊಸ ಯಮಹಾ FZS-FI ರಿಯರ್ ಡಿಸ್ಕ್ ಬ್ರೇಕ್‌ ಮಾರುಕಟ್ಟೆಗೆ!

ಮುಂದಿನ ಸುದ್ದಿ »

ತುಮಕೂರು: ಬಿಜೆಪಿ ನಾಯಕಿ, ಸಂಸದೆ ಶೋಭಾ ಕರಂದ್ಲಾಜೆ ಬಂಧನ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×