‘ಪ್ರಿಯಾಂಕಾ ಗಾಂಧಿ ಕಳ್ಳನ ಹೆಂಡತಿ’: ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವೆ ಉಮಾಭಾರತಿ

0
255

ನ್ಯೂಸ್ ಕನ್ನಡ ವರದಿ (17-4-2019): ಪ್ರಿಯಾಂಕ ಗಾಂಧಿಯವರು ವಾರಾಣಾಸಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಅವರು ಸ್ವಯಂ ಇಂಗಿತ ವ್ಯಕ್ತ ಪಡಿಸಿದ್ದು ಮಾತ್ರವಲ್ಲದೆ, ಅವರ ಪತಿ ರಾಬರ್ಟ್ ವಾದ್ರಾ ಅವರು ಕೂಡಾ ಪಕ್ಷ ಇಚ್ಛಿಸಿದರೆ ಸ್ಪರ್ಧಿಸುತ್ತಾರೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಉಮಾಭಾರತಿಯವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಪ್ರಿಯಾಂಕಾ ವಾರಾಣಾಸಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತಿದೆ. ಅದರಲ್ಲಿ ತಪ್ಪೇನು ಇಲ್ಲ. ಯಾರು ಎಲ್ಲಿಂದ ಬೇಕಿದ್ದರೂ ಸ್ಪರ್ಧಿಸಬಹುದು. ಅವರು ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಿರುವುದರಿಂದ ಯಾವುದೇ ಪರಿಣಾಮ ಆಗದು. ಪ್ರಿಯಾಂಕಾ ಪತಿ ಭೂ ಕಬಳಿಕೆ ಆರೋಪ ಎದುರಿಸುತ್ತಿದ್ದಾರೆ. ಓರ್ವ ಕಳ್ಳನ ಪತ್ನಿ ಎನ್ನುವ ರೀತಿಯಲ್ಲಿ ಪ್ರಿಯಾಂಕಾ ಅವರನ್ನು ನೋಡಲಾಗುತ್ತಿದೆ,” ಎಂದು ಉಮಾಭಾರತಿ ಹೇಳಿದ್ದಾರೆ. ರಾಹುಲ್​ ಗಾಂಧಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಉಮಾ ಭಾರತಿ ಹೇಳಿದ್ದಾರೆ. ರಾಬರ್ಟ್​​ ವಿರುದ್ಧ ಆರೋಪ ಕೇಳಿ ಬಂದಿದೆ ಅಷ್ಟೇ. ಆದರೆ, ಅದಿನ್ನೂ ಸಾಬೀತಾಗಿಲ್ಲ. ಹೀಗಿರುವಾಗ ಉಮಾ ಭಾರತಿ ಈ ರೀತಿ ಹೇಳುವುದು ಸರಿಯಲ್ಲ ಎಂದು ಹಲವು ನಾಯಕರ ಅಭಿಪ್ರಾಯ.

LEAVE A REPLY

Please enter your comment!
Please enter your name here