ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿಸಲು ದೇವೇಗೌಡ ಮುಂದಾಳುತ್ವ ವಹಿಸುತ್ತಾರೆ: ಸಿಎಂ ಕುಮಾರಸ್ವಾಮಿ

0
94

ನ್ಯೂಸ್ ಕನ್ನಡ ವರದಿ (16-5-2019): ಲೋಕಸಭಾ ಚುನಾವಣೆಯ ಫಲಿತಾಂಶ ಹತ್ತಿರ ಬರುತ್ತಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಸಂಚಲನ ಹೆಚ್ಚಿದೆ. ಮೇ 23 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತಿತರರು ಒಟ್ಟಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನ ಮಂತ್ರಿಯನ್ನಾಗಿಸಲು ‘ರಾಗಾ ಫಾರ್ ಪಿಎಂ ಮಿಷನ್’ ಆರಂಭಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ದೇಶವನ್ನು ಮುನ್ನಡೆಸಲು ರಾಹುಲ್ ಗಾಂಧಿ ಸಮರ್ಥರಾಗಿದ್ದು ಅವರನ್ನು ಬೆಂಬಲಿಸಲು ಪ್ರಾದೇಶಿಕ ಪಕ್ಷಗಳೆಲ್ಲವೂ ಒಂದಾಗಿವೆ. ಫಲಿತಾಂಶ ಪ್ರಕಟವಾದ ನಂತರ ದೇವೇಗೌಡರು ಎಲ್ಲಾ ವಿರೋಧ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ರಾಹುಲ್ ಪ್ರಧಾನಿಯಾಗಲು ಬೆಂಬಲಿಸುವಂತೆ ಮನವೊಲಿಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಮೋದಿಯವರ ಮೈತ್ರಿ ಕೂಟ ಅಧಿಕಾರಕ್ಕೆ ಬರಲ್ಲ, ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಅವರ ಹತಾಶೆಯನ್ನು ತೋರಿಸುತ್ತಿವೆ. ಜನರಿಗೆ ಅವರ ಬಗ್ಗೆ ಸಂಶಯ ಮೂಡಿದೆ, ಹಾಗೂ ಕರ್ನಾಟಕದಲ್ಲಿ ಮೈತ್ರಿಕೂಟ 18 ರಿಂದ 20 ಸ್ಥಾನಗೆಲ್ಲುವ ಭರವಸೆಯನ್ನು ಕುಮಾರಸ್ವಾಮಿ ವ್ಯಕ್ತ ಪಡಿಸಿದ್ದಾರೆ.

LEAVE A REPLY

Please enter your comment!
Please enter your name here