ಮಾಜಿ ಪ್ರಧಾನಿ ರಾಜೀವ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಿದ ಚುನಾವಣಾ ಆಯೋಗ

0
179

ನ್ಯೂಸ್ ಕನ್ನಡ ವರದಿ (8-5-2019): ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, “ರಾಜೀವ್ ರನ್ನು ಎಲ್ಲರೂ ಮಿಸ್ಟರ್ ಕ್ಲೀನ್ ಎಂದೇ ಸಂಭೋದಿಸುತ್ತಾ ಇದ್ದರು, ಆದರೆ ಅವರು ಭೃಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ತೀರಿಕೊಂಡರು” ಎಂದು ಹೇಳಿದ್ದರು. ಮೋದಿ ಹೇಳಿಕೆ ವಿರೋಧಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು.

ಆದರೆ ಈ ಭಾಷಣದಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಆಯೋಗದ ಸಮಿತಿ ಮೋದಿಗೆ ಕ್ಲೀನ್ ಚಿಟ್ ನೀಡಿದೆ. ಈಗಾಗಲೇ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರಿ ನಂಬರ್ ಒನ್ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ, ಹಾಲಿ ಪ್ರಧಾನಿಯನ್ನು ಚೋರ್ ಎಂದು ಕಾಂಗ್ರೆಸ್ ಸಂಬೋಧಿಸುತ್ತದೆ. ಆದರೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದರೆ ಅವರಿಗೆ ಸಮಸ್ಯೆ ಏನು ಎಂದು ಬಿಜೆಪಿ ಪ್ರಶ್ನಿಸಿದೆ.

LEAVE A REPLY

Please enter your comment!
Please enter your name here