ಅನರ್ಹ ಶಾಸಕರ ರಹಸ್ಯ ಸಭೆ!: ಬಿಜೆಪಿ ಸರ್ಕಾರ ಉರುಳಿಸಲು ಸಿದ್ಧವಾಗಿದೆಯ ಕೆಡ್ಡ!? ಸುದ್ದಿ ಓದಿ

0
2552

ನ್ಯೂಸ್ ಕನ್ನಡ ವರದಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಅನರ್ಹತೆ ಗುರಿಯಾಗಿರುವ ಶಾಸಕರು ಇದೀಗ ಬಿಜೆಪಿ ವಿರುದ್ಧ ತಿರುಗಿಬಿದ್ದಿದ್ದಾರೆ ಎನ್ನಲಾಗಿದೆ.

ಬಿಜೆಪಿಯನ್ನು ನಂಬಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡಿದ್ದ ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸಿದ್ದರು. ಈ ಆದೇಶದ ವಿರುದ್ಧ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರೆ, ಇದು ಇತ್ಯರ್ಥವಾಗುವವರೆಗೆ ಅವರ ರಾಜಕೀಯ ಜೀವನ ಅತಂತ್ರವಾಗಿಯೇ ಇರಲಿದೆ. ಇತ್ತ ಮಂತ್ರಿ ಹುದ್ದೆ ನೀಡುವುದಾಗಿ ಹೇಳಿದ್ದ ಬಿಜೆಪಿ ನಾಯಕರು ಈಗ ಅತೃಪ್ತ ಶಾಸಕರತ್ತ ತಿರುಗಿಯೂ ನೋಡುತ್ತಿಲ್ಲ ಹೀಗಾಗಿ ಅನರ್ಹ ಶಾಸಕರು ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶಗೊಂಡಿರುವ ಅನರ್ಹ ಶಾಸಕರು ಇಂದು ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ರಹಸ್ಯ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ನಲ್ಲಿನ ಕಾನೂನು ಹೋರಾಟಕ್ಕೂ ಬಿಜೆಪಿ ನಾಯಕರು ಬೆಂಬಲ ನೀಡುತ್ತಿಲ್ಲ. ಕೋರ್ಟ್ ಹೋರಾಟದಲ್ಲೂ ಬಿಜೆಪಿ ನಾಯಕರು ಅಸಹಕಾರ ತೋರಿದ್ದಾರೆ ಎಂದು ರೆಬಲ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here