ಆಗಸ್ಟ್ ಮೊದಲ ವಾರದಲ್ಲಿ SSLC ಫಲಿತಾಂಶ ಪ್ರಕಟ: ಜುಲೈ ಅಂತ್ಯಕ್ಕೆ ಪಿಯುಸಿ ಫಲಿತಾಂಶ ಪ್ರಕಟ!

0
28

ನ್ಯೂಸ್ ಕನ್ನಡ ವರದಿ: ಕೊರೋನಾ ಸಂಕಷ್ಟದ ನಡುವೆಯೂ ಎಸ್‌ಎಸ್‌ಎಲ್ಸಿ ಪರೀಕ್ಷೆ ಮುಂದುವರೆದಿದೆ. ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ನಡೆಯಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತು ಮಾತನಾಡಿ, ಜುಲೈ ಅಂತ್ಯಕ್ಕೆ ಸೆಕೆಂಡ್ ಪಿಯುಸಿ ಮತ್ತು ಆಗಸ್ಟ್ ಮೊದಲ ವಾರ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜುಲೈ ಅಂತ್ಯಕ್ಕೆ ದ್ವಿತೀಯ ಪಿಯುಸಿ, ಆಗಸ್ಟ್ ಮೊದಲ ವಾರ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here