ಸಾಲೆತ್ತೂರಿನಲ್ಲಿ ಎನ್ನಾರ್ಸಿ, ಸಿಎಎ ವಿರುದ್ಧ ಪ್ರತಿಭಟನೆಗೆ ಅನುಮತಿಯಿಲ್ಲ: ಪೊಲೀಸರು ಹೇಳಿದ್ದೇನು?

0
306

ನ್ಯೂಸ್ ಕನ್ನಡ ವರದಿ: (30.01.2020): ದೇಶದಾದ್ಯಂತ ಸಿಎಎ ಮತ್ತು ಎನ್ನಾರ್ಸಿ ವಿರೋಧಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವೆಡೆ ಸುಸೂತ್ರವಾಗಿ ಪ್ರತಿಭಟನೆಗಳು ನಡೆದರೂ, ಇನ್ನು ಕೆಲವೆಡೆ ಪ್ರತಿಭಟನೆಗಳಿಗೆ ಅನುಮತಿ ನಿರಾಕರಣೆ ಮಾಡಲಾಗುತ್ತಿದೆ. ಇದೀಗ ಬಂಟ್ವಾಳ ತಾಲೂಕಿನ ಸಾಲೆತ್ತೂರು ಎಂಬಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಒಂದು ದಿನದ ಮುಂಚೆ ಅನುಮತಿ ನಿರಾಕರಣೆ ಮಾಡಿದ್ದು ಸಾರ್ವಜನಿಕರಲ್ಲಿ ಅಸಮಧಾನಕ್ಕೆ ಕಾರಣವಾಗಿದೆ.

ಈ ಕುರಿತಾದಂತೆ ವಿಟ್ಲ ಪೊಲೀಸ್ ಠಾಣೆಯನ್ನು ನ್ಯೂಸ್ ಕನ್ನಡ ಪ್ರತಿನಿಧಿಗಳು ಸಂಪರ್ಕಿಸಿದಾಗ, ಬಂದೋಬಸ್ತ್ ನಲ್ಲಿ ಪೊಲೀಸರು ಬ್ಯಝಿ ಇರುವ ಕಾರಣ ಅನುಮತಿ ನೀಡಲಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಜಾತ್ರೆ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಪೊಲೀಸರು ಬಂದೋಬಸ್ತ್ ನಲ್ಲಿ ನಿರತರಾಗಿರುವ ಕಾರಣ ಅನುಮತಿ ನೀಡಲು ಸಾಧ್ಯವಾಗುತ್ತಿಲ್ಲ, ಅದಕ್ಕಾಗಿ ಬದಲಿ ತಾರೀಕನ್ನು ಕೂಡಾ ನಿಶ್ಚಯ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಬಂದೋಬಸ್ತ್ ಬ್ಯುಝಿ ಇದೆ ಎಂದು ಕೆಲವು ದಿನಗಳ ಮುಂಚೆಯೇ ಹೇಳಬಹುದಿತ್ತಲ್ವಾ ಎಂಬ ಪ್ರಶ್ನೆಗೆ ಮೇಲಧಿಕಾರಿಗಳ ಜೊತೆ ಮಾತನಾಡುವಂತೆ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here