ನರೇಂದ್ರ ಮೋದಿ ಟೀಕಾಕಾರ, ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಗೆ ಜೀವಾವಧಿ ಶಿಕ್ಷೆ!

0
3216

ನ್ಯೂಸ್ ಕನ್ನಡ ವರದಿ: (20.06.19): ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಗುಜರಾತ್ ನ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಸಂಜೀವ್ ಭಟ್ ರಿಗೆ ಕಸ್ಟಡಿ ಮರಣ ಪ್ರಕರಣವೊಂದರ ಕುರಿತಾದಂತೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಈಗಾಗಲೇ ವಕೀಲರ ವಿರುದ್ಧ ಮಾದಕ ವಸ್ತು ಸಾಗಾಣಿಕೆಯ ಸುಳ್ಳು ಆರೋಪ ದಾಖಲಿಸಿದ್ದ 1996ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜೀವ್ ಭಟ್ ಅವರಲ್ಲದೆ, ಇಬ್ಬರು ಮಾಜಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಇನ್ನೂ ಏಳು ಮಂದಿಯನ್ನು ಬಂಧಿಸಲಾಗಿದೆ.

1989ರ ಕಸ್ಟಡಿಯಲ್ಲಿ ಸಾವು ಪ್ರಕರಣದಲ್ಲಿ ಭಟ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಜಾಮ್ ನಗರ್ ನ್ಯಾಯಾಲಯವು ಆದೇಶ ನೀಡಿದೆ. ಜಾಮ್ ನಗರದಲ್ಲಿ ಹೆಚ್ಚುವರಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಗ, ಗಲಭೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು.ಈ ಪೈಕಿ ಪ್ರಭುದಾಸ್ ವೈಷ್ನಾನಿ ಎಂಬಾತ ಬಿಡುಗಡೆಯಾದ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.

LEAVE A REPLY

Please enter your comment!
Please enter your name here