ನಿನ್ನೆ ಹೊರಬಿದ್ದ ಸಿದ್ಧಾರ್ಥ್ ಮರಣೋತ್ತರ ವರದಿಯಲ್ಲಿ ಏನಿದೆ ಗೊತ್ತೇ?

0
880

ನ್ಯೂಸ್ ಕನ್ನಡ ವರದಿ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ, ‘ಕಾಫಿ ಡೇ’ ಕಂಪನಿಯ ಮಾಲಿಕ ವಿ.ಜಿ.ಸಿದ್ಧಾರ್ಥ ಅವರು ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದು ಸೋಮವಾರ ರಾತ್ರಿ ನೇತ್ರಾವತಿ ಸೇತುವೆ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ನಾಪತ್ತೆಯಾಗಿದ್ದರು. ಆ ಬಳಿಕ ಮೂವತ್ತಾರು ಗಂಟೆಗಳ ಬಳಿಕ ಅವರು ನಾಪತ್ತೆಯಾಗಿದ್ದ ನೇತ್ರಾವತಿ ಸೇತುವೆಯಿಂದ ನಾಲ್ಕು ಕಿ.ಮೀ ದೂರದ ಹೊಯ್ಗೆ ಬಜಾರ್‌ನ ನೇತ್ರಾವತಿ ನದಿ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಸಿದ್ಧಾರ್ಥ ಅವರದ್ದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬಂದರೂ, ಆ ಕುರಿತು ಸಾಕಷ್ಟುಅನುಮಾನಗಳಿದ್ದ ಹಿನ್ನೆಲೆಯಲ್ಲಿ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಕೆಎಂಸಿ ಆಸ್ಪತ್ರೆಯ ಫೊರೇನ್ಸಿಕ್‌ ತಜ್ಞ ಡಾ.ಪ್ರತೀಕ್‌ ರಸ್ತೋಗಿ ಹಾಗೂ ವೆನ್ಲಾಕ್‌ ಆಸ್ಪತ್ರೆಯ ಫೊರೇನ್ಸಿಕ್‌ ವಿಭಾಗದ ಡಾ.ರಶ್ಮಿ ಮರಣೋತ್ತರ ಪರೀಕ್ಷೆ ನೆರವೇರಿಸಿದ್ದರು. ಇದೀಗ ಆ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಬಂದಿದೆ.

ವೆನ್ಲಾಕ್‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು, ಕೆಎಂಸಿ ಆಸ್ಪತ್ರೆಯ ಫೊರೇನ್ಸಿಕ್‌ ತಜ್ಞ ಡಾ.ಪ್ರತೀಕ್‌ ರಸ್ತೋಗಿ ಹಾಗೂ ವೆನ್ಲಾಕ್‌ ಆಸ್ಪತ್ರೆಯ ಫೊರೇನ್ಸಿಕ್‌ ವಿಭಾಗದ ಡಾ.ರಶ್ಮಿ ಮರಣೋತ್ತರ ಪರೀಕ್ಷೆ ನೆರವೇರಿಸಿದ್ದರು. ಇದೀಗ ಆ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಬಂದಿದೆ. ವೆನ್ಲಾಕ್‌ ಆಸ್ಪತ್ರೆಯ ಅಧೀಕ್ಷಕರು ಈ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಸಿದ್ಧಾರ್ಥ ಆತ್ಮಹತ್ಯೆಯ ಕಾರಣದ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಕೇವಲ ನೀರಿಗೆ ಬಿದ್ದು ಉಸಿರುಗಟ್ಟಿ ಸಾವಿಗೀಡಾಗಿ ಸಾವು ಸಂಭವಿಸಿದೆ ಎಂದು ಉಲ್ಲೇಖಿಸಲಾಗಿದೆ. ಇನ್ನು ಸಿದ್ಧಾರ್ಥ ಅವರದು ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ ಸಾಕಷ್ಟುಅನುಮಾನಗಳಿರುವ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಪರೀಕ್ಷೆಗೆ ಅವರ ದೇಹದ ಭಾಗಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸುವಂತೆ ಆಸ್ಪತ್ರೆ ವೈದ್ಯರನ್ನು ಕೋರಿದ್ದರು. ಅದರಂತೆ ಫೊರೇನ್ಸಿಕ್‌ ತಜ್ಞರು ಸಿದ್ಧಾರ್ಥ ದೇಹದ ವಿವಿಧ ಭಾಗಗಳನ್ನು ದಾವಣಗೆರೆಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದರು. ಅಲ್ಲಿಂದ 10 ದಿನದೊಳಗೆ ವರದಿ ಬರುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here