ಕರ್ನಾಟಕ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ: ಎಸ್ಡಿಪಿಐ

0
155

ಮುಖ್ಯಮಂತ್ರಿ ಕುಮಾರಸ್ವಾಮಿ ಫೆಬ್ರವರಿ 8ರಂದು ಸದನದಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ.

ಜೆಡಿಎಸ್-ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆ ಸಂದರ್ಭದಲ್ಲಿ ಮುಸ್ಲಿಮರ ಅಭಿವೃದ್ಧಿ ಬಗ್ಗೆ ಶಿಫಾರಸ್ಸು ಮಾಡಿದ ಸಾಚಾರ್ ಮತ್ತು ಮಿಶ್ರಾ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿತ್ತು. ರಾಜ್ಯದಲ್ಲಿ ಅತೀ ಹಿಂದುಳಿದ ಜನಸಮುದಾಯವಾಗಿದೆ ಮುಸ್ಲಿಂ ಸಮುದಾಯ. ಸಮಗ್ರ ಕರ್ನಾಟಕ ಅಭಿವೃದ್ಧಿಯಾಗಬೇಕಾದರೆ ಹಿಂದುಳಿದ ಮುಸ್ಲಿಮರು ಪ್ರಗತಿ ಸಾಧಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಮ್ಮಿಶ್ರ ಸರಕಾರ ವಿಶೇಷ ಕಾಳಜಿ ವಹಿಸಿ ಕೆಲಸ ಮಾಡಬೇಕಾಗಿತ್ತು. ಆದರೆ ಬಜೆಟ್‍ನಲ್ಲಿ ಯಾವುದೇ ವಿಶೇಷ ಹಣಕಾಸು ಮಂಜೂರು ಮಾಡದೆ ಸಮ್ಮಿಶ್ರ ಸರಕಾರ ಮುಸ್ಲಿಮರಿಗೆ ಮತ್ತೊಮ್ಮೆ ವಂಚಿಸಿದೆ.

ಜಾತ್ಯಾತೀತ ಪಕ್ಷಗಳು ಅಧಿಕಾರಕ್ಕೆ ಬರಬೇಕು. ಬಿಜೆಪಿಯನ್ನು ಸೋಲಿಸಬೇಕು ಎಂದು ಮುಸ್ಲಿಮರು ಶೇಕಡಾ 95% ಮತಗಳನ್ನು ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ನೀಡಿದ್ದವು. ಆದರೆ ಸಮ್ಮಿಶ್ರ ಸರಕಾರ ಮುಸ್ಲಿಂ ಮತದಾರರ ನಿರೀಕ್ಷೆಗಳನ್ನು ಹುಸಿ ಮಾಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಆರೋಪಿಸಿದ್ದಾರೆ.

ರಾಜ್ಯದ ಒಟ್ಟು ಬಜೆಟ್ ಮೊತ್ತ 2ಲಕ್ಷ 34 ಸಾವಿರದ 153 ಕೋಟಿ ರೂಪಾಯಿಗಳ ಪೈಕಿ ಎಲ್ಲಾ ಅಲ್ಪಸಂಖ್ಯಾತ ಜನಸಮುದಾಯಗಳಿಗೆ ಕೇವಲ 1 ಸಾವಿರ ಕೋಟಿಗೂ ಕಡಿಮೆ ಹಣವನ್ನು ನೀಡಲಾಗಿದೆ. ಕಳೆದ ವರ್ಷ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ 2,300 ಕೋಟಿ ರೂಪಾಯಿಗಳನ್ನು ನೀಡಿತ್ತು. ಅಲ್ಪಸಂಖ್ಯಾತ ಜನಸಮುದಾಯಗಳಾದ ಮುಸ್ಲಿಮ್, ಕ್ರೈಸ್ತ, ಜೈನ್, ಸಿಖ್ಖ್, ಪಾರ್ಸಿ, ಭೌದ್ಧ ಒಟ್ಟು ಜನಸಂಖ್ಯೆಯು ರಾಜ್ಯದಲ್ಲಿನ ಒಟ್ಟು ಜನಸಂಖ್ಯೆಯ ಶೇಕಡಾ 20%ಕ್ಕಿಂತ ಹೆಚ್ಚಿದೆ. ಈ ಸಣ್ಣ ಮೊತ್ತದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಅಸಾಧ್ಯ. ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಹೇಳಿಕೆ ನೀಡಿ ನಾನು ಮುಖ್ಯಮಂತ್ರಿಯಾಗಿದ್ದರೆ ಅಲ್ಪಸಂಖ್ಯಾತರ ಋಣ ತೀರಿಸಲು ಕನಿಷ್ಠ 10ಸಾವಿರ ಕೋಟಿ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದೆ ಎಂದಿದ್ದರು. ಎಸ್‍ಡಿಪಿಐ ಪಕ್ಷವು ಕಳೆದ 3 ವರ್ಷಗಳಿಂದ 10 ಸಾವಿರ ಕೋಟಿ ರೂಪಾಯಿ ಅಲ್ಪಸಂಖ್ಯಾತರಿಗೆ ಬಜೆಟ್‍ನಲ್ಲಿ ಮೀಸಲಿಡಬೇಕೆಂದು ಹೋರಾಡುತ್ತಿದೆ.

ರಾಜ್ಯ ಸರಕಾರವು ಬಿಜೆಪಿ ಮತ್ತು ಕೋಮುವಾದಿ ಶಕ್ತಿಗಳ ಒತ್ತಡಕ್ಕೆ ಮಣಿದು ಈ ರೀತಿಯ ತಾರತಮ್ಯ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಾತ್ಯಾತೀತ ಪಕ್ಷಗಳಿಗೆ ಅಲ್ಪಸಂಖ್ಯಾತರು ಬೆಂಬಲಿಸಬೇಕೆಂದಾದರೆ ಕೂಡಲೇ 10 ಸಾವಿರ ಕೋಟಿ ರೂಪಾಯಿ ಬಜೆಟ್ ನೀಡಬೇಕು ಆ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಎಸ್‍ಡಿಪಿಐ ಒತ್ತಾಯಿಸುತ್ತದೆ.

ಪಕ್ಷದ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ, ಪತ್ರಿಕಾಗೋಷ್ಠಿ, ಸಭೆ ಸಮಾರಂಭ ಮಾಡಿ ಈ ನಿಟ್ಟಿನಲ್ಲಿ ಸರಕಾರಕ್ಕೆ ಒತ್ತಡ ಹೇರಲು ತೀರ್ಮಾನಿಸಿದೆ. ರಾಜ್ಯದ ಎಲ್ಲಾ ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಸೇರಿ ಅಲ್ಪಸಂಖ್ಯಾತರ ಹಕ್ಕು, ಸಾಮಾಜಿಕ ನ್ಯಾಯ ಕಲ್ಪನೆಯ ಈ ಸಂವಿಧಾನಬದ್ದ ಹೋರಾಟಕ್ಕೆ ಬೆಂಬಲ ನೀಡಬೇಕು.

ಅಲ್ಪಸಂಖ್ಯಾತರ ಮತ ಪಡೆದು ಗೆದ್ದಿರುವ ಶಾಸಕರುಗಳು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಒತ್ತಡಹಾಕಿ ಅಲ್ಪಸಂಖ್ಯಾತರ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸಬೇಕೆಂದು ಎಸ್‍ಡಿಪಿಐ ಆಗ್ರಹಿಸುತ್ತದೆ.

LEAVE A REPLY

Please enter your comment!
Please enter your name here