ಮೋದಿ ನೇಣು ಹಾಕಿಕೊಳ್ಳುತ್ತಾನಾ ಎಂದ ಖರ್ಗೆ ವಿರುದ್ಧ ಕೇಸು ದಾಖಲಿಸಿ: ಶೋಭಾ

0
163

ನ್ಯೂಸ್ ಕನ್ನಡ ವರದಿ(13.5.19): ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷವು 40ಕ್ಕಿಂತ ಹೆಚ್ಚು ಸೀಟುಗಳನ್ನು ಪಡೆದುಕೊಳ್ಳುವುದಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾನೆ. ಕಾಂಗ್ರೆಸ್ ಪಕ್ಷ ನಲ್ವತ್ತಕ್ಕಿಂತ ಹೆಚ್ಚಿನ ಸೀಟುಗಳನ್ನು ಪಡೆದುಕೊಂಡರೆ ಮೋದಿ ನೇಣು ಹಾಕಿಕೊಳ್ಳುತ್ತಾನಾ ಎಂದು ಖಾರವಾಗಿ ಪ್ರಶ್ನಿಸಿದ್ದರು. ಇದೀಗ ಈ ಕುರಿತಾದಂತೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೋಲಿನ ಭಯ, ಹತಾಶೆಯಿಂದಾಗಿ ಖರ್ಗೆ ಅವರು ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಮೋದಿ ವಿಜಯ್ ಚೌಕ್‌ನಲ್ಲಿ ನೇಣು ಹಾಕಿಕೊಳ್ಳುವುದಿಲ್ಲ; ಬದಲಿಗೆ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ’ ಎಂದು ತಿರುಗೇಟು ನೀಡಿದರು.

‘ಹಿಂದುಳಿದ ವರ್ಗದವರಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಹಿಂದುಳಿದ ವರ್ಗಕ್ಕೆ ಸೇರಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಹಿಂದ ವರ್ಗಕ್ಕೆ ಏನು ಮಾಡಿದರು ಎಂಬುದನ್ನು ಮೊದಲು ಹೇಳಲಿ. ನಮಗೆ ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಬೇಕಿಲ್ಲ’ ಎಂದು ಕುಟುಕಿದರು.

LEAVE A REPLY

Please enter your comment!
Please enter your name here