ಕನ್ನಡಿಗ ಶ್ರೇಯಸ್ ಅಧ್ಬುತ ಬೌಲಿಂಗ್ ದಾಳಿಗೆ ಶರಣಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು!

0
364

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಾಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು.

ಆದರೆ ವಿರಾಟ್ ಕೊಹ್ಲಿ ಲೆಕ್ಕಾಚಾರ ತಲೆಕೆಳಗೆ ಮಾಡಿದ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಕೇರಳದ ಯುವ ಆಟಗಾರ ಸಂಜು ಸ್ಯಾಮ್ಸನ್ 45 ಎಸೆತಗಳಲ್ಲಿ 10 ಸಿಕ್ಸರ್ ನೆರವಿನಿಂದ ಅಜೇಯ 92 ರನ್ ಗಳಿಸಿ ತಂಡದ ಮೊತ್ತವನ್ನು 217ಕ್ಕೆ ಏರಿಸಿ 20 ಓವರ್‌ಗಳಲ್ಲಿ ಬೆಂಗಳೂರು ತಂಡಕ್ಕೆ 218ರನ್ ಗುರಿ ನೀಡಿದರು.

ಗುರಿ ಬೆನ್ನಟ್ಟಿದ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಅರ್ಧ ಶತಕ ದಾಖಲಿಸಿ ನೆರವಿಗೆ ಬಂದರೂ ನಿರಂತರ ವಿಕೆಟ್ ಕಳೆದುಕೊಂಡ ಆರ್‌ಸಿಬಿ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 198ರನ್ ಗಳಿಸಲಷ್ಟೇ ಸಾಧ್ಯವಾಯಿತು. ಬೆಂಗಳೂರು ತಂಡದ ಪರ ಮನ್ದೀಪ್ 47, ವಾಷಿಂಗ್ಟನ್ ಸುಂದರ್ 35 ರನ್ ಬಾರಿಸಿದರೂ ರಾಜಸ್ಥಾನ ನೀಡಿದ ಬೃಹತ್ ಗುರಿಯನ್ನು ತಲುಪುವುದರಲ್ಲಿ ವಿಫಲವಾಯಿತು.

ರಾಜಸ್ತಾನದ ಪರ ಕನ್ನಡಿಗ ಶ್ರೇಯಸ್ ಗೋಪಾಲ್ ಅತ್ಯಮೂಲ್ಯ 2 ವಿಕೆಟ್ ಪಡೆದು ಪಂದ್ಯದ ಗತಿಯನ್ನೇ ಬದಲಾಯಿಸಿದರು. ನಾಲ್ಕು ಓವರ್‌ಗಳಲ್ಲಿ ಕೇವಲ 22 ರನ್ ನೀಡಿ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ವಿಕೆಟ್ ಪಡೆದು ಪಂದ್ಯ ಗೆಲ್ಲಿಸಿಕೊಟ್ಟರು.

LEAVE A REPLY

Please enter your comment!
Please enter your name here