“ಸಿದ್ಧರಾಮಯ್ಯನವರು ಮತ್ತೊಮ್ಮೆ ಸಿಎಂ” ಅಭಿಯಾನಕ್ಕೆ ಕಾರಣರಾದ ದೇವೇಗೌಡರು?

0
415

ನ್ಯೂಸ್ ಕನ್ನಡ ವರದಿ (15.5.19): ದೇವೇಗೌಡರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ 18 ಪುಟಗಳ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಈ ಪತ್ರದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಹೇಗೆ ಅಡ್ಡಿ ಆಗುತ್ತಿದ್ದಾರೆ ಎನ್ನುವ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಈ ವಿಚಾರ ಹೈ ಕಮಾಂಡ್ ನಿಂದ ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ ಕೋಪಗೊಂಡಿದ್ದಾರೆ ಎನ್ನಲಾಗಿದೆ.

ಸರ್ಕಾರವನ್ನ ದುರ್ಬಲಗೊಳಿಸಿ ಕಾಂಗ್ರೆಸ್ ಪಕ್ಷವನ್ನು ಸಿದ್ದರಾಮಯ್ಯ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಲೋಕಸಭೆಯಲ್ಲಿ ದೋಸ್ತಿಗಳಿಗೆ ಕಮ್ಮಿ ಸೀಟು ಬಂದರೆ ಅದಕ್ಕೆ ಸಿದ್ದರಾಮಯ್ಯ ಅವರೇ ನೇರ ಕಾರಣರಾಗಿರುತ್ತಾರೆ. ಸಿದ್ದರಾಮಯ್ಯ ತಂತ್ರದಿಂದಾಗಿಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಫಲಕೊಟ್ಟಿಲ್ಲ. ಜೆಡಿಎಸ್‍ನಲ್ಲಿದ್ದಾಗ ಅಹಿಂದ ಚಟುವಟಿಕೆ ನಡೆಸಿ ಆ ಬಳಿಕ ಅವರು ಕಾಂಗ್ರೆಸ್‍ಗೆ ಬಂದು ಮುಖ್ಯಮಂತ್ರಿಯಾದರು. ಹೀಗಾಗಿ ಸಮ್ಮಿಶ್ರ ಸರ್ಕಾರ ಉಳಿಯಬೇಕಾದರೆ ನೀವು ಸಿದ್ದರಾಮಯ್ಯರನ್ನು ನಿಯಂತ್ರಿಸಲೇಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ದೇವೇಗೌಡರ ಪತ್ರದ ಬಗ್ಗೆ ಕೇಳಿ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ ಹಾಗೂ ಇದೇ ಕಾರಣಕ್ಕೆ `ಮತ್ತೆ ಸಿದ್ದರಾಮಯ್ಯ ಸಿಎಂ’ ಅಭಿಯಾನಕ್ಕೆ ಆಪ್ತರು ಮತ್ತೆ ಚಾಲನೆ ನೀಡಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here