ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆಗೆ ಕೇಂದ್ರ ನಕಾರ!, ಕನ್ನಡಿಗರಿಗೆ ಉದ್ಯೋಗ ಸಿಗದಂತೆ ಕೇಂದ್ರ ಪಿತೂರಿ!: ಸಿದ್ದರಾಮಯ್ಯ ಕಿಡಿ

0
258

ನ್ಯೂಸ್ ಕನ್ನಡ ವರದಿ: ಕನ್ನಡದಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಅವಕಾಶ ಕಲ್ಪಸಿದಿರುವ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಹಿಂದಿಯೇತರ ಭಾಷಿಗರಿಗೆ ಬ್ಯಾಂಕ್ ಉದ್ಯೋಗ ಸಿಗದಂತೆ ತಡೆಯುವ ಪಿತೂರಿ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಿಂದ 26 ಬಿಜೆಪಿಯ ಸಂಸದರು ಕೇಂದ್ರಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿಯೂ ಬಿಜೆಪಿಯದ್ದೇ ಸರ್ಕಾರವಿದೆ. ಆದರೂ ಸಹ ಐಬಿಪಿಎಸ್ ಪರೀಕ್ಷೆಯಲ್ಲಿ ರಾಜ್ಯದ ಪರೀಕ್ಷಾರ್ಥಿಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲು ಬಿಜೆಪಿ ನಾಯಕರು ವಿಫಲರಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.

ಕನ್ನಡ ನಾಡು-ನುಡಿ ಬಗೆಗಿನ ಮಲತಾಯಿ ಧೋರಣೆಯಿಂದ ಕೇಂದ್ರ ಸರ್ಕಾರ ಕನ್ನಡಿಗರ ಆತ್ಮಾಭಿಮಾನವನ್ನು ಕೆಣಕುತ್ತಿದೆ. ಹಿಂದಿ ಹೇರಿಕೆ, ನಾಡ ಧ್ವಜಕ್ಕೆ ಅಡ್ಡಗಾಲು, ನೆರೆಪರಿಹಾರದಲ್ಲಿ‌ ನಿರ್ಲಕ್ಷ್ಯ… ಕರ್ನಾಟಕದ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ.
ಕನ್ನಡಿಗರ ಔದಾರ್ಯ ಮತ್ತು ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ. ಎಂದು ಟ್ವೀಟ್ ಮಾಡುವ ಮುಖಾಂತರ ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here