ಪೋನ್ ಕದ್ದಾಲಿಕೆಯಷ್ಟೆಯಲ್ಲ, ಆಪರೇಷನ್ ಕಮಲದ ಬಗ್ಗೆಯೂ ಸಿಬಿಐ ತನಿಖೆಯಾಗಲಿ!: ಸಿದ್ದು ಟ್ವೀಟ್

0
903

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಇತ್ತೀಚಿಗೆ ಸದ್ದು ಮಾಡಿದ ಪೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ತಿರುವ ಪಡೆದಿದೆ. ಪೋನ್ ಕದ್ದಾಲಿಕೆ ಪ್ರಕರಣವನ್ನು ಇದೀಗ ಸಿಬಿಐಗೆ ವಹಿಸಿ, ಸಿಎಂ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ಅನೇಕ ರಾಜಕಾರಣಿ , ಪೋಲಿಸ್ , ಪತ್ರಕರ್ತರ ಪೋನ್ ಕದ್ದಾಲಿಕೆಯಾಗಿಸೆ ಎಂದು ಅಶೋಕ್ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪೋನ್ ಕದ್ದಾಲಿಕೆ ಪ್ರಕರಣ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಮನವಿ ಮಾಡಿದ್ದರು.

ಯಡಿಯೂರಪ್ಪ ಅಮಿತ್ ಶಾ ಭೇಟಿಯಾದ ವೇಳೆಯಲ್ಲಿ ರಾಜ್ಯದ ಪೋನ್ ಟ್ಯಾಪಿಂಗ್ ಪ್ರಕರಣ ಕುರಿತು ಚರ್ಚೆ ನಡೆಸಿದ್ದರು. ಅಲ್ಲದೇ ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿಲು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಅಮಿತ್ ಶಾ ಸೂಚಿಸಿದ್ದಾರೆ.

ತನಿಖೆಯನ್ನು ಸ್ವಗತಿಸಿದ ಸಿದ್ದರಾಮಯ್ಯ ಟ್ವೀಟ್, ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ ‘ಆಪರೇಷನ್ ಕಮಲ’ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಅಂತ ಅಗ್ರಹಿಸಿದ್ದಾರೆ.

ಇದೇ ವೇಳೆ ಅವರು ರಾಜ್ಯದಲ್ಲಿ ಹಿಂದೆ @BJP4Karnataka ಅಧಿಕಾರದಲ್ಲಿದ್ದಾಗ ನಮ್ಮ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ ಇದ್ದ @BJP4Karnataka‌ಕ್ಕೆ ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ ಅಂತ ಹೇಳಿದ್ದಾರೆ.

LEAVE A REPLY

Please enter your comment!
Please enter your name here