ಮುಂದಿನ ಸಿಎಂ ಖರ್ಗೆ ಎಂಬ ಮಾತಿಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಏನು ಗೊತ್ತೆ?

0
1842

ನ್ಯೂಸ್ ಕನ್ನಡ ವರದಿ: ಮಲ್ಲಿಕಾರ್ಜುನ ಖರ್ಗೆ ಡಿಸೆಂಬರ್ 9 ರ ನಂತರ ಸಿಹಿ ಹಂಚುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಸಿಹಿ ಹಂಚುತ್ತಾರೆ ಎಂದರೆ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಅರ್ಥ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೀನ-ದಲಿತ, ಬಡವರ ಪರವಾಗಿ ಕೆಲಸ ಮಾಡುವ ವ್ಯಕ್ತಿ ಮುಖ್ಯಮಂತ್ರಿ ಆಗಬೇಕು. ಮಲ್ಲಿಕಾರ್ಜುನ ಖರ್ಗೆ ಡಿಸೆಂಬರ್ 9 ರ ನಂತರ ಸಿಹಿ ಹಂಚುತ್ತೇನೆ ಎಂದು ಹೇಳಿದ್ದಾರೆ. ಅವರ ಮಾತಿನ ಅರ್ಥ ಏನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳುವ ಮೂಲಕ ಮುಂದಿನ ಸಿಎಂ ಮಲ್ಲಿಕಾರ್ಜುನ್ ಖರ್ಗೆ ಎಂದು ಪರೋಕ್ಷವಾಗಿ ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಪಕ್ಷದಲ್ಲಿ ಅಂತಹ ಯಾವುದೇ ವಿದ್ಯಮಾನ ಇಲ್ಲ, ಕುಮಾರಸ್ವಾಮಿ ಏನು ಭಾಷಣ ಮಾಡಿದ್ದಾರೋ ಗೊತ್ತಿಲ್ಲ. ನಿಮಗೆ ಬೇಕಾದಂತೆ ಅರ್ಥ ಮಾಡಿಕೊಳ್ಳಬೇಡಿ ಎಂದು ಹೇಳಿದರು.

ಈ ವಿಷಯವಾಗಿ ಸಮಾಜಿಕ ಜಾಲತಾಣದಲ್ಲಿ ಬಹಳಷ್ಟು ಚರ್ಚೆಯಾಗಿದ್ದು ಇದಕ್ಕು ಇದು ಉತ್ತರವಾಗಲಿದೆ.

LEAVE A REPLY

Please enter your comment!
Please enter your name here