Wednesday December 6 2017

Follow on us:

Contact Us
    456

ಇದೇ ತಿಂಗಳಲ್ಲಿ ಅನುಷ್ಕಾ-ವಿರಾಟ್ ಕೊಹ್ಲಿ ಮದುವೆ: ಈ ಕುರಿತು ಅನುಷ್ಕಾ ಹೇಳಿದ್ದೇನು ಗೊತ್ತೇ?

ನ್ಯೂಸ್ ಕನ್ನಡ ವರದಿ-(06.12.17): ಬಾಲಿವುಡ್ ನ ಖ್ಯಾತ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ 2013ರಿಂದ ಪರಸ್ಪರ ಪ್ರೀತಿಸುತ್ತಿದ್ದು, ಈ ಕುರಿತು ಮಾಧ್ಯಮಗಳ ಮುಂದೂ ಹೇಳಿಕೊಂಡಿದ್ದಾರೆ. ಆದರೂ ಮದುವೆಯ ವಿಚಾರಕ್ಕೆ ಬಂದರೆ ಇವರಿಬ್ಬರು ಯಾವುದೇ ಸುಳಿವನ್ನು ನೀಡುತ್ತಿರಲಿಲ್ಲ. ಇಂದು ಪ್ರಸಿದ್ಧ ಮಾಧ್ಯಮವೊಂದು ವಿರಾಟ್ ಮತ್ತು ಅನುಷ್ಕಾ ಇದೇ ತಿಂಗಳ 9-11 ತಾರೀಕುಗಳ ಮಧ್ಯೆ ಇಟಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿ ಮಾಡಿತ್ತು. ಹಲವು ರಾಷ್ಟ್ರೀಯ ಮಾಧ್ಯಮಗಳು ಕೂಡಾ ಸುದ್ದಿ ಪ್ರಸಾರ ಮಾಡಿದ್ದವು.

ಈ ಕುರಿತಾದಂತೆ ಮಾಧ್ಯಮವೊಂದು ಅನುಷ್ಕಾ ಶರ್ಮಾರಲ್ಲಿ ವಿಚಾರಿಸಿದಾಗ, ಅನುಷ್ಕಾ ಈ ಸುದ್ದಿಯನ್ನು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಅನುಷ್ಕಾ ಶರ್ಮಾ ಒಂದು ಬ್ರಾಂಡ್ ಮೀಟಿಂಗ್ ಸಲುವಾಗಿ ಇಟಲಿಗೆ ತೆರಳಿದ್ದಾರೆ. ಅವರು ಇಟಲಿಗೆ ಮದುವೆಯಾಗುವ ನಿಮಿತ್ತ ತೆರಳುತ್ತಿದ್ದಾರೆ ಎನ್ನುವುದು ವದಂತಿಯಾಗಿದ್ದು, ಇದರಲ್ಲಿ ಯಾವುದೇ ರೀತಿಯ ಸತ್ಯಾಂಶವಿಲ್ಲ ಎಂದು ಮಾಧ್ಯಮವೊಂದಕ್ಕೆ ಸ್ಪಷ್ಟ ಪಡಿಸಿದ್ದಾರೆ ಎಂದು ಡಿಎನ್’ಎ ವರದಿ ಮಾಡಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಾಹುಲ್ ಗಾಂಧಿಯು ಅಲ್ಲಾವುದ್ದೀನ್ ಖಿಲ್ಜಿಯ ಸಂಬಂಧಿ ಹಾಗೂ ಬಾಬರ್ ಭಕ್ತ!

ಮುಂದಿನ ಸುದ್ದಿ »

ಕರ್ನಾಟಕಕ್ಕೆ ಮೋದಿ ಪ್ರಚಾರಕ್ಕೆ ಬಂದ್ರೂ ಬಿಜೆಪಿ ಗೆಲ್ಲಲ್ಲ: ಸಿಎಂ ಸಿದ್ದರಾಮಯ್ಯ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×